ಇಂಡಿ : ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಪಟ್ಟಣದ ಕುಂಬಾರ ಓಣಿಯ ಶ್ರೀಶೈಲ್ ದೇವರ ಬಂಧಿತ ಆರೋಪಿ. ಇನ್ನು ಶ್ರೀಶೈಲ್ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಪೊಲೀಸರು ದಾಳಿಗೈದು 8 ಸಾವಿರ ಮೌಲ್ಯದ ಗಾಂಜಾ ಜಪ್ತಿಗೈದಿದ್ದಾರೆ. ಇಂಡಿ ಶಹರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.