ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ..! ಹಾಗಾದರೆ ಕರ್ನಾಟಕದಲ್ಲಿ..?
KARNATAKA
Voice Of Janata : political News :Editor :
ದೇಶದ 15 ರಾಜ್ಯಗಳ ಒಟ್ಟು 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಈ ಪೈಕಿ ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿಯ ರಾಜೀವ್ ಚಂದ್ರಶೇಖರ್, ಕಾಂಗ್ರೆಸ್‌ನ ಡಾ. ಎಲ್. ಹನುಮಂತಯ್ಯ, ಜಿ.ಸಿ. ಚಂದ್ರಶೇಖರ್ ಮತ್ತು ಸೈಯದ್ ನಾಸಿರ್ ಹುಸೇನ್ ಅವರ ಅವಧಿ ಏಪ್ರಿಲ್ 2 ರಂದು ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು, ಚುನಾವಣೆ ದಿನಾಂಕ ಘೋಷಿಸಿದ್ದು, ಇದೇ ಫೆಬ್ರವರಿ 27 ಮತದಾನ ಮತ್ತು ಮತ ಎಣಿಕೆ ನಡೆಯಲಿದೆ
ಫೆಬ್ರವರಿ 8 ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ಫೆಬ್ರವರಿ 15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಇನ್ನು ಫೆಬ್ರವರಿ 27 ಮತದಾನ ಮತ್ತು ಮತ ಎಣಿಕೆ ಕಾರ್ಯ ನಡೆಯಲಿದೆ. ಫೆಬ್ರವರಿ 27 ರ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಂದೇ ಸಂಜೆ 5 ಗಂಟೆಯಿಂದ ಫಲಿತಾಂಶ ಪ್ರಕಟವಾಗಲಿದೆ.