• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!

    ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!

    ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವ

    ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವ

    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನ

      Voiceofjanata.in

      November 6, 2026
      0
      ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನ
      0
      SHARES
      10
      VIEWS
      Share on FacebookShare on TwitterShare on whatsappShare on telegramShare on Mail

      ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನ

      ಬೆಂಗಳೂರು :ರಾಜ್ಯದಲ್ಲಿ ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಗೆ ತುರ್ತು ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರದಿಂದ ಪ್ರತಿ ರೈತರಿಗೆ ಗರಿಷ್ಠ 2 ಹೆಕ್ಟೇರ್‌ಗೆ ಮಿತಿಗೊಳಿಸಿ, 5000 ರೂ.ಗಳ ಬರ ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಇದರ ಮೊದಲ ಕಂತಿನ ಮಧ್ಯಂತರ ಪರಿಹಾರವಾಗಿ 2,500 ರೂ. ಬಿಡುಗಡೆ ಮಾಡುವ ಪ್ರಕ್ರಿಯೆಗೆ ಇಂದು ಚಾಲನೆ ನೀಡಲಾಗಿದೆ.

      ರಾಜ್ಯ ಸರ್ಕಾರವು ಒಟ್ಟು 226 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ. 2026ರ ಜೂನ್ 1ರಿಂದ ಸೆಪ್ಟೆಂಬರ್ 16ರವರೆಗೆ ಕರ್ನಾಟಕಕ್ಕೆ ಕೇವಲ 495 ಮಿ.ಮೀ. ಮಳೆಯಾಗಿದ್ದು, ವಾಡಿಕೆ ಮಳೆ 766 ಮಿ.ಮೀ.ಗೆ ಹೋಲಿಸಿದರೆ ಶೇ. 35ರಷ್ಟು ಕೊರತೆ ದಾಖಲಾಗಿದೆ. ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಶೇ. 47ರಷ್ಟು, ಉತ್ತರ ಒಳನಾಡು ಕರ್ನಾಟಕದಲ್ಲಿ ಶೇ. 42, ಮಲೆನಾಡಿನಲ್ಲಿ ಶೇ. 37 ಮತ್ತು ಕರಾವಳಿ ಕರ್ನಾಟಕದಲ್ಲಿ ಶೇ. 27 ಕೊರತೆ ಕಂಡುಬಂದಿದೆ. 31 ಜಿಲ್ಲೆಗಳ ಪೈಕಿ 30 ಜಿಲ್ಲೆಗಳು, 240 ತಾಲ್ಲೂಕುಗಳ ಪೈಕಿ 226 ತಾಲ್ಲೂಕುಗಳು ಮತ್ತು 850 ಹೋಬಳಿಗಳ ಪೈಕಿ 765 ಹೋಬಳಿಗಳಲ್ಲಿ ತೀವ್ರ ಮಳೆ ಕೊರತೆ ದಾಖಲಾಗಿದೆ.

      ಜಂಟಿ ಬೆಳೆಹಾನಿ ಸಮೀಕ್ಷೆಯ ವರದಿಯ ಪ್ರಕಾರ, ರಾಜ್ಯದಾದ್ಯಂತ ಒಟ್ಟು ಬಿತ್ತನೆ ಗುರಿ 84.10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 69.57 ಲಕ್ಷ ಹೆಕ್ಟೇರ್ ಬಿತ್ತನೆಯಾಗಿದೆ. ಇದರಲ್ಲಿ ಅಂದಾಜು 57.93 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ (ಶೇ. 83.26 ರಷ್ಟು) ಬೆಳೆ ಹಾನಿಯಾಗಿದ್ದು, ಒಟ್ಟು 62,481.88 ಕೋಟಿ ರೂ.ಗಳಷ್ಟು ಆರ್ಥಿಕ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

      ಎನ್‌ಡಿಆರ್‌ಎಫ್ ಅಡಿಯಲ್ಲಿ 22,400.58 ಕೋಟಿ ರೂ.ಗಳ ಆರ್ಥಿಕ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಇದರಲ್ಲಿ ಬೆಳೆಹಾನಿ ಇನ್‌ಪುಟ್ ಸಬ್ಸಿಡಿಗೆ 7,943.55 ಕೋಟಿ ರೂ., ಕುಡಿಯುವ ನೀರಿಗೆ 1,727 ಕೋಟಿ ರೂ., ಜಾನುವಾರು ರಕ್ಷಣೆಗೆ 583.04 ಕೋಟಿ ರೂ. ಹಾಗೂ 61.91 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ 12,146.99 ಕೋಟಿ ರೂ.ಗಳ ಅನುಗ್ರಹ ಪರಿಹಾರ ಸೇರಿದೆ. ಕೇಂದ್ರ ಸರ್ಕಾರವು ಎನ್‌ಡಿಆರ್‌ಎಫ್ ನಿಯಮಗಳನ್ನು ಮರುಪರಿಶೀಲಿಸಿ ಸಡಿಲಗೊಳಿಸಬೇಕೆಂದು ಹಾಗೂ ಬರ ಪರಿಹಾರ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಕೃಷಿ ಸಚಿವರು ಹಾಗೂ ಕೇಂದ್ರ ಗೃಹ ಸಚಿವರಿಗೆ ಐದಕ್ಕೂ ಹೆಚ್ಚು ಬಾರಿ ಪತ್ರ ಬರೆದು ಒತ್ತಾಯಿಸಲಾಗಿದೆ.

      ಪರಿಹಾರ ವಿತರಣೆಯಲ್ಲಿ ವಿಳಂಬ ಮತ್ತು ಅಕ್ರಮಗಳನ್ನು ತಪ್ಪಿಸಲು ‘ಪರಿಹಾರ’ ಪೋರ್ಟಲ್, ಡಿಜಿಟಲ್ ಬೆಳೆ ಸಮೀಕ್ಷೆ ಮತ್ತು ‘ಫ್ರೂಟ್ಸ್’ (FRUITS) ದತ್ತಾಂಶಗಳನ್ನು ಒಳಗೊಂಡ ಡಿಜಿಟಲ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗಿದೆ. ಈ ವ್ಯವಸ್ಥೆಯಿಂದಾಗಿ ರೈತರು ಯಾವುದೇ ಕಚೇರಿಗಳಿಗೆ ಅಲೆಯುವುದು ಅಥವಾ ಭೌತಿಕ ದಾಖಲೆಗಳನ್ನು ಸಲ್ಲಿಸುವ ಅಗತ್ಯವಿರುವುದಿಲ್ಲ. ಬದಲಾಗಿ ಆಧಾರ್ ಆಧಾರಿತ ಡಿಬಿಟಿ ಮೂಲಕ ಪರಿಹಾರದ ಹಣ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗುತ್ತದೆ.

      ಎನ್‌ಡಿಆರ್‌ಎಫ್‌ನಿಂದ ಅನುದಾನ ಬಿಡುಗಡೆಯಾದ ಕೂಡಲೇ ಬಾಕಿ ಉಳಿದಿರುವ ಪರಿಹಾರ ಮೊತ್ತವನ್ನು ಇದೇ ಪರಿಷ್ಕೃತ ದರಗಳ ಅನ್ವಯ ಒಂದೇ ಕಂತಿನಲ್ಲಿ ಪಾವತಿಸಲಾಗುವುದು. 1,743.53 ಲಕ್ಷ ರೂ.ಗಳ ಇನ್‌ಪುಟ್ ಸಬ್ಸಿಡಿಯನ್ನು ವಿತರಿಸಲಾಗುತ್ತಿದ್ದು, ಯಾದಗಿರಿ ಜಿಲ್ಲೆಗೆ ಒಟ್ಟು ಅರ್ಹ ರೈತರಿಗೆ ಪಾವತಿಸಬೇಕಾಗಿರುವ ಇನ್‌ಪುಟ್ ಸಬ್ಸಿಡಿ ಮೊತ್ತವು 16,830 ಲಕ್ಷ ರೂ.ಗಳಾಗಿರುತ್ತದೆ. ಉಳಿದ ಜಿಲ್ಲೆಗಳಿಗೆ ಪರಿಹಾರ ಬಿಡುಗಡೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಇನ್‌ಪುಟ್ ಸಬ್ಸಿಡಿಯ ಜೊತೆಗೆ, ಫಸಲ್ ಬಿಮಾ ಯೋಜನೆ ಮತ್ತು ಹವಾಮಾನ ಆಧಾರಿತ ಬೆಳೆ ವಿಮೆ (WBCIS) ಅಡಿಯಲ್ಲಿಯೂ ರೈತರಿಗೆ ವಿಮಾ ಪರಿಹಾರವನ್ನು ತ್ವರಿತವಾಗಿ ಒದಗಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.

      ಕೇಂದ್ರ ಸರ್ಕಾರದಿಂದ ಇನ್ನೂ ಬರ ಪರಿಹಾರದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ, ಸದ್ಯಕ್ಕೆ ರಾಜ್ಯ ಸರ್ಕಾರದ ಸ್ವಂತ ಸಂಪನ್ಮೂಲಗಳಿಂದಲೇ ಈ ಪರಿಹಾರದ ಹಣ ಬಿಡುಗಡೆ ಮಾಡಲಾಗುತ್ತಿದೆ. ಈ ವಿಚಾರವಾಗಿ ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಲು ಸಮಯಾವಕಾಶ ಕೋರಿದ್ದು, ಅವರಿಂದ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ.

      -ಇಂದು ವಿಧಾನಸೌಧದಲ್ಲಿ 2026ರ ಮುಂಗಾರು ಅವಧಿಯ ಬರಗಾಲದಿಂದ ಉಂಟಾದ ಬೆಳೆ ಹಾನಿಗೆ ಸಂಬಂಧಿಸಿದಂತೆ ರೈತರಿಗೆ ಮೊದಲ ಕಂತಿನ ಮಧ್ಯಂತರ ಇನ್‌ಪುಟ್‌ ಸಬ್ಸಿಡಿ ನೆರವು ಬಿಡುಗಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಪ್ರಮುಖ ಅಂಶಗಳು.

      Tags: #Emergency aid for drought-hit farmers; decision taken to provide ₹5#indi / vijayapur#Public News#State News#Today News#Voice Of Janata#Voiceofjanata.in#ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನ000 as drought relief.Dkc
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ…

      ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ…

      0
      ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನ

      ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನ

      0
      ನಿರಂಕುಶ ಅಧಿಕಾರ ನೆಲೆಗೊಳ್ಳುವ ಮುನ್ನವೇ ಸರಕಾರಗಳನ್ನು ಬದಲಿಸಬೇಕು. ಯಾಕೆ ?

      ನಿರಂಕುಶ ಅಧಿಕಾರ ನೆಲೆಗೊಳ್ಳುವ ಮುನ್ನವೇ ಸರಕಾರಗಳನ್ನು ಬದಲಿಸಬೇಕು. ಯಾಕೆ ?

      0
      ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ…

      ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ…

      November 6, 2026
      ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನ

      ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನ

      November 6, 2026
      ನಿರಂಕುಶ ಅಧಿಕಾರ ನೆಲೆಗೊಳ್ಳುವ ಮುನ್ನವೇ ಸರಕಾರಗಳನ್ನು ಬದಲಿಸಬೇಕು. ಯಾಕೆ ?

      ನಿರಂಕುಶ ಅಧಿಕಾರ ನೆಲೆಗೊಳ್ಳುವ ಮುನ್ನವೇ ಸರಕಾರಗಳನ್ನು ಬದಲಿಸಬೇಕು. ಯಾಕೆ ?

      November 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.