ಇಂಧನ ಸಚಿವ ಕೆಜೆ ಜಾರ್ಜ ಸಕಾರಾತ್ಮಕ ಸ್ಪಂದನೆ : ಶಾಸಕ ಮಂಜುನಾಥ್..
ಇಂಧನ ಸಚಿವ ಕೆಜೆ ಜಾರ್ಜ್ ರನ್ನು ಭೇಟಿ ಮಾಡಿದ ಶಾಸಕ ಎಂಆರ್ ಮಂಜುನಾಥ್
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸುವಂತೆ ಇಂಧನ ಸಚಿವ ಕೆ.ಜೆ ಜಾರ್ಜ್ ರವರಿಗೆ ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಎಂಆರ್ ಮಂಜುನಾಥ್ ಮನವಿ ಮಾಡಿದ್ದಾರೆ.
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ತೋಟದ ಜಮೀನುಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದೆ ಇರುವುದರಿಂದ ರೈತರು ಬೆಳೆದಿರುವ ಬೆಳೆಗಳು ಸಂಪೂರ್ಣ ಒಣಗಿ ಹೋಗುತ್ತಿದೆ. ಇದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ ಆದ್ದರಿಂದ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಮನವಿ ಮಾಡಿದ್ದಾರೆ.
ಶಾಸಕ ಎಂಆರ್ ಮಂಜುನಾಥ್ ರವರ ಮನವಿಗೆ ಇಂಧನ ಸಚಿವ ಕೆಜೆ ಜಾರ್ಜ್ ಪ್ರತಿಕ್ರಿಯಿಸಿ ರೈತರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ , ನಾನು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರ ಬಳಿ ಮಾಹಿತಿ ಪಡೆದು 6 ರಿಂದ 7 ಗಂಟೆಗಳ ಕಾಲ ತ್ರೀ ಫೇಸ್ ವಿದ್ಯುತ್ ನೀಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮುಂಡಿ ಜಿಲ್ಲೆ.