ಇಂಡಿ : ಪರಿಸರ ರಕ್ಷಿಸುವ ಜವಾಬ್ದಾರಿ ಮಾನವರದ್ದಾಗಿದೆ. ಪರಿಸರ ಮನುಷ್ಯನ ಉಸಿರು, ಜೀವಾಳ ಒಂದು ವೇಳೆ ಗಿಡಮರಗಳಿಲ್ಲದೇ ಇದ್ದರೇ ಏನಾಗಬಹುದು ಅಂತಾ ಒಮ್ಮೆ ಕಲ್ಪಿಸಿಕೊಳ್ಳಿ. ಆದರೆ ಬಹುಪಾಲು ಜನರು ಇದನ್ನು ಸರಿಯಾಗಿ ನಿಭಾಯಿಸಿಲ್ಲ. ಜೂನ್ 5ರಂದು ಶಾಲೆಗಳಲ್ಲಿ ಸೇರಿದಂತೆ ಹಲವೆಡೆ ಗಿಡಗಳನ್ನು ನೀಡುವ ಮೂಲಕ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಆದರೆ ಇದು ಇನ್ನೂ ಆಚರಣೆಗೆ ಮಾತ್ರ ಸೀಮಿತ, ಪರಿಸರವು ಕೇವಲ ಪರಿಸರ ದಿನಾಚರಣೆಗೆ ಮಾತ್ರವೇ ಸೀಮಿತವಾದಂತಿದೆ. ಜತೆಗೆ ಕೆಲವು ಭಾಷಣಗಳಿಗೆ ಮಾತ್ರ ಸಾಕ್ಷಿಯಾಗಿದೆ ಎಂದು ಪತ್ರಕರ್ತ ಖಾಜು ಸಿಂಗೆಗೊಳ ಮಾತಾನಾಡಿದರು. ಇಂಡಿ ಪಟ್ಟಣದ ಎಸ್ ಎಸ್ ಪ್ಯಾರಾಮೆಡಿಕಲ್ ಕಾಲೇಜು ಆಶ್ರಯದಲ್ಲಿ ಆಯೋಜನೆ ಗೊಳಿಸಿರುವ ಪರಿಸರ ದಿನಾಚರಣೆ ನಿಮತ್ಯ ಮುಖ್ಯ ಅತಿಥಿಯಾಗಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತಾನಾಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಸಂತೋಷ ಕೆಂಬೊಗಿ ಮಾತಾನಾಡಿ ಇಂದಿನ ದಿನಗಳಲ್ಲಿ ಜೂನ್ 5ರಂದು ಮಾತ್ರ ಗಿಡ ನೆಡುವ ಮೂಲಕ “ಪರಿಸರ ಪ್ರೇಮಿ’ ಎನಿಸಿ ಅನಂತರ ಅದರ ಬಗ್ಗೆ ಯಾವುದೇ ರೀತಿಯ ಕಾಳಜಿ ವಹಿಸದೇ ಪರಿಸರದ ಕುರಿತಾದ ಭಾಷಣಗಳಿಗೆ ಸೀಮಿತವಾಗಿ ಬಿಟ್ಟಿದೆ. ಅನಂತರ ಪರಿಸರವು ನೆನಪಾಗಬೇಕೆಂದರೆ ಮುಂದಿನ ವರ್ಷದ ಜೂನ್ 5 ಬರಬೇಕು. ಇದು ಇಂದಿನ ಸ್ಥಿತಿ. ಶಾಲೆಗಳಲ್ಲಿ ಸಣ್ಣ ತರಗತಿಗಳಿಂದಲೇ ಪಠ್ಯಗಳಲ್ಲಿ ಪರಿಸರದ ಬಗ್ಗೆ ಮಾಹಿತಿ ನೀಡುವ ಮೂಲಕ ಮಕ್ಕಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. ವಾರದಲ್ಲಿ ಒಂದು ಅವಧಿಯಾದರೂ ಪರಿಸರದ ಬಗ್ಗೆ ಮಾಹಿತಿ ನೀಡುವ ಮೂಲಕ ಚಿಕ್ಕ ವಯಸ್ಸಿನಿಂದಲೇ ಪರಿಸರದ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಲು ಸಹಕಾರಿಯಾಗಬಹುದು.
ಈ ಸಂದರ್ಭದಲ್ಲಿ ಪ್ರಾಚಾರ್ಯರು ದಾನಯ್ಯ ಮಠಪತಿ , ಎಮ್.ಎಸ್ ಪಾಟೀಲ, ಗಣಪತಿ ಹೂಗಾರ, ಭಾಗ್ಯಶ್ರೀ ಹೋಟಗಿ, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರು.