ವಿಶ್ವ ಪರಿಸರ ದಿನ ಗಿಡ ಬೆಳೆಸಿ, ಪರಿಸರ ಉಳಿಸಿ, ಪೀಳಿಗೆ ರಕ್ಷಿಸಿ-ಸಂತೋಷ ಬಂಡೆ
ಇಂಡಿ: ಪರಿಸರ ಉಳಿಸಿ, ಬೆಳೆಸಿ ಸಂರಕ್ಷಿಸುವ ಸಂಕಲ್ಪ ನಮ್ಮ ಮನೆಯಿಂದ ಅಲ್ಲ ನಮ್ಮ ಮನಸ್ಸಿನಿಂದಲೇ ಆರಂಭವಾಗಲಿ. ಅವಸಾನದ ಅಂಚಿನಲ್ಲಿರುವ ಪರಿಸರವನ್ನು ರಕ್ಷಿಸಲು ನಾವೆಲ್ಲರೂ ಮುಂದಾಗಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಅವರು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯಲ್ಲಿ ವಿಶ್ವ ಪರಿಸರ ದಿನದ ನಿಮಿತ್ತ ಸಸಿ ನೆಟ್ಟು “ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ”ಕುರಿತು ಮಾತನಾಡಿದರು.ಶಿಕ್ಷಣವೇ ಇಲ್ಲದ ಸಾಲುಮರದ ತಿಮ್ಮಕ್ಕ ಪರಿಸರದ ಅರಿವಿನಿಂದ ಸಾವಿರಾರು ಗಿಡಗಳನ್ನು ನೆಟ್ಟಿರುವದನ್ನು ಮಾದರಿಯಾಗಿಟ್ಟುಕೊಂಡು, ವಿದ್ಯಾರ್ಥಿಗಳು ಪ್ರಕೃತಿ ಉಳಿಸುವ ಸಂಕಲ್ಪ ಮಾಡಿ, ಜಾಗತಿಕ ತಾಪಮಾನ ಹೆಚ್ಚಳದಿಂದ ಮನುಕುಲವನ್ನು ರಕ್ಷಿಸಬೇಕು ಎಂದು ಹೇಳಿದರು.
ಶಿಕ್ಷಕ ಎಸ್ ಆರ್ ಚಾಳೇಕರ ಮಾತನಾಡಿ, ನಗರೀಕರಣದ ಬೆಳವಣಿಗೆಯಿಂದ ಪ್ರಕೃತಿ ಸೌಂದರ್ಯ ನಶಿಸಿ ಹೋಗುತ್ತಿದೆ. ಇದನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಮನೆಯ ಸುತ್ತಲೂ ಹಸಿರು ಬೆಳೆಸುವ ಅಭ್ಯಾಸ ರೂಢಿಸಿಕೊಂಡು ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದರು. ಶಿಕ್ಷಕಿ ಎಸ್ ಡಿ ಬಿರಾದಾರ, ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ಬಳಕೆಯ ಹಾನಿ, ನೀರಿನ ಮಿತ ಬಳಕೆಯ ಕುರಿತು ಮಾಹಿತಿ ನೀಡಿದರು.
ಮುಖ್ಯ ಶಿಕ್ಷಕರಾದ ಅನಿಲ ಪತಂಗಿ, ವ್ಹಿ ವೈ ಪತ್ತಾರ, ಎ ಎಂ ಬೆದ್ರೇಕರ ಹಾಗೂ ಶಿಕ್ಷಕರಾದ ಎಸ್ ಎಸ್ ಅರಬ, ಎಸ್ ಎಂ ಪಂಚಮುಖಿ, ಎಸ್ ಬಿ ಕುಲಕರ್ಣಿ, ಜೆ ಎಂ ಪತಂಗಿ, ಸಾವಿತ್ರಿ ಸಂಗಮದ, ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಎಸ್ ಎನ್ ಡಂಗಿ, ಜೆ ಸಿ ಗುಣಕಿ, ಎಸ್ ವ್ಹಿ ಬೇನೂರ, ಎಫ್ ಎ ಹೊರ್ತಿ, ಶಾಂತೇಶ ಹಳಗುಣಕಿ, ಸುರೇಶ ದೊಡ್ಯಾಳಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಮುಂದಿನ ಪೀಳಿಗೆಗೆ ಪರಿಸರವನ್ನು ಉಳಿಸಲು ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು, ಪೋಷಿಸುವ ಮೂಲಕ ಅರಣ್ಯ ಸಂಪತ್ತನ್ನು ಬೆಳೆಸುವಲ್ಲಿ ಕಾಳಜಿ ವಹಿಸಬೇಕು.