ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆ ವ್ಯಾಪ್ತಿಯಲ್ಲಿನ ನೋಂದಣಿ ಕಛೇರಿಗಳು ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.30 ರವರೆಗೆ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಉಪನೋಂದಣಿ ಕಛೇರಿಗಳಲ್ಲಿನ ಜನಸಂದಣಿಯನ್ನು ಪರಿಗಣಿಸಿ ಉಲ್ಲೇಖಿತ ಜ್ಞಾಪನ ಪತ್ರದಲ್ಲಿ ಉಪನೋಂದಣಿ ಕಛೇರಿಗಳ ಕೆಲಸದ ವೇಳೆಯನ್ನು ಬೆಳಗ್ಗೆ 8.00 ಗಂಟೆಯಿಂದ ರಾತ್ರಿ 8.00 ಗಂಟೆಯವರೆಗೆ ವಿಸ್ತರಿಸಿ ಆದೇಶಿಸಲಾಗಿತ್ತು.
ಪ್ರಸ್ತುತ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ವೇಳೆಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಬೆಳಗ್ಗೆ 10.00 ಗಂಟೆಯಿಂದ ಸಂಜೆ 7.00 ಗಂಟೆಯವರೆಗೆ ನಿಗಧಿಪಡಿಸಿ ಆದೇಶಿಸಿದೆ. ಅದರಂತೆ ಉಪನೋಂದಣಿ ಕಛೇರಿಗಳು ಕರ್ತವ್ಯ ನಿರ್ವಹಿಸುವಂತೆ ಸರ್ಕಾರ ಸೂಚಿಸಿದೆ.