ಐಎಎಸ್-ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ವಿಜಯಪುರ ಸೆಪ್ಟೆಂಬರ್ 3 :ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ಇವರ ವತಿಯಿಂದ 2024-25ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ:10-09-2024ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ www.dom.karnataka.gov.in ಹಾಗೂ ಸಹಾಯವಾಣಿ 8277799990 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.