ಉಚಿತ ನೇತ್ರದಾನ ಹಾಗೂ ರಕ್ತದಾನ ಶಿಬಿರ..
ಇಂಡಿ: ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಅ.6 ಹಾಗೂ
7 ರಂದು ಜರುಗಲಿರುವ ಶ್ರೀ ಸಿದ್ಧಲಿಂಗ ಮಹಾರಾಜರ 96ನೇ ಪುಣ್ಯಾರಾಧನೆಯ ಅಂಗವಾಗಿ ಸ್ಥಳಿಯ ಹಾಗೂ ಅಗರಖೇಡದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ
ನಗರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಅಕ್ಟೋಬರ್ 4 ರಂದು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ.
ಈ ಶಿಬಿರದಲ್ಲಿ ಅನುಗ್ರಹ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞ ಡಾ. ಪ್ರಭುಗೌಡ ಪಾಟೀಲ ಭಾಗವಹಿಸಿ ರೋಗಿಗಳ ನೇತ್ರ ತಪಾಸಣೆ ನಡೆಸಲಿದ್ದಾರೆ ಎಂದು ಶ್ರೀ ಮಠದ ಪ್ರಕಟಣೆ
ತಿಳಿಸಿದೆ.