ಇಂಡಿ : ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೇರೂಗಿ ಸಾಲೋಟಗಿ ರಸ್ತೆಯಲ್ಲಿ ನಡೆದಿದೆ. ತಡವಲಗಾ ಗ್ರಾಮದ ನಿವಾಸಿ ಮಲ್ಲಕಪ್ಪ ಮಡ್ನಳ್ಳಿ ಅಸುನೀಗಿರುವ ದುರ್ದೈವಿ. ಅಲ್ಲದೇ ಮತ್ತೋರ್ವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಇಂಡಿ ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.