ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಮಲೆ ಮಹದೇಶ್ವರ ಬೆಟ್ಟದಿಂದ ಚಾಮರಾಜನಗರದವರೆಗೆ ಪಾದಯಾತ್ರೆ .
ಹನೂರು :ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮಾದಪ್ಪನ ದೇಗುಲದ ಮುಂಭಾಗ ಗೋ ಪೂಜೆ ಹಾಗೂ ನೇಗಿಲಿಗೆ ಪೂಜೆಯನ್ನು ನೆರವೇರಿಸಿದರು. ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗುವ ಮೂಲಕ ರೈತರು ಪಾದಯಾತ್ರೆ ಆರಂಭಿಸಿದರು.
ಹನೂರು ಪಟ್ಟಣದ ಸರ್ಕಲ್ ನಲ್ಲಿ ಪ್ರತಿಭಟನೆ ಮತ್ತು ಪಾದಯಾತ್ರೆ ಮಾಡಿದ ನಂತರ ಮಾತನಾಡಿದ ರೈತ ಮುಖಂಡರಾದ ಹೊನ್ನೂರು ಪ್ರಕಾಶ್ ಮಹದೇಶ್ವರ ಬೆಟ್ಟದ ಕಾಡಂಚಿನ ಗ್ರಾಮಗಳ ಜನರು ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ. ರೈತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ದಿಸೆಯಲ್ಲಿ ಸಮಸ್ಯೆಗಳನ್ನು ಬಗೆಹರಿ ಸುವ ನಿಟ್ಟಿನಲ್ಲಿ ಮಹದೇಶ್ವರ ಬೆಟ್ಟದಿಂದ ಕಾಡಂಚಿನ ಗ್ರಾಮಗಳ ಜನರಿಗೆ ಸೌಲಭ್ಯ ಕಲ್ಪಿಸಿ ಬೆಟ್ಟದಿಂದ ಚಾಮರಾಜನಗರಕ್ಕೆ ಹಮ್ಮಿಕೊಂಡಿರುವ ಪಾದಯಾತ್ರೆ ಯಶಸ್ವಿಯಾಗುವುದರ ಮೂಲಕ ನಿರ್ಧರಿಸುವ ಉದ್ದೇಶ ಈಡೇರಲಿ ಹಾಗೂ ಬುಡಕಟ್ಟು ಜನರ ಸಮಸ್ಯೆಗಳಿಗೆ ಮುಕ್ತಿ ಸಿಗಬೇಕು. ಈ ದಿಸೆಯಲ್ಲಿ ರೈತ ಸಂಘದಿಂದ ನೂರಾರು ರೈತರು ಪಾದಯಾತ್ರೆಯ ಮೂಲಕ ಪ್ರತಿ ನಿತ್ಯ 50 ಕಿ.ಮೀ. ಕ್ರಮಿಸಿ, ಜಿಲ್ಲಾ ಕೇಂದ್ರಕ್ಕೆ ತೆರಳಲಿದೆ. ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಹಮ್ಮಿಕೊಂಡಿರುವ ಈ ಹೋರಾಟ ನಿಜಕ್ಕೂ ಅರ್ಥಪೂರ್ಣ. ಆದ್ದರಿಂದ ಸರ್ಕಾರ ಈ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ! ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಈ ಪಾದಯಾತ್ರೆಯಲ್ಲಿ ರೈತ ಮುಖಂಡರಾದ ಜೆನುಗೂಡು ಮಹಾದೇವಸ್ವಾಮಿ, ಶಾಂತಕುಮಾರ್ , ಕೌದಳ್ಳಿ ಲೂಯಿಷ್ ಹಾಗೂ ಜಿಲ್ಲೆಯ ವಿವಿಧ ತಾಲೂಕಿನ ರೈತರು ಭಾಗವಹಿಸಿದ್ದರು.