ಕೃಷಿ ಚಟುವಟಿಕೆಯೊಂದಿಗೆ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಆರಂಭಿಸಲು ಆಸಕ್ತಿ ವಹಿಸಬೇಕು : ಜಿಲ್ಲಾಧಿಕಾರಿ ಡಾ. ಆನಂದ.ಕೆ
ವಿಜಯಪುರ ಆಗಸ್ಟ್.೨೯ : ಕೃಷಿ ಚಟುವಟಿಕೆಯೊಂದಿಗೆ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಆರಂಭಿಸಲು ಆಸಕ್ತಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ.ಕೆ ಹೇಳಿದರು.
ಶುಕ್ರವಾರ ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕೃಷಿ ಇಲಾಖೆ, ಹಾಗೂ ಕೆಪೆಕ್ ಸಂಸ್ಥೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆಯ ಯೋಜನೆ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸ್ವಸಹಾಯ ಗುಂಪು ಚಟುವಟಿಕೆಗಳ ಕಾರ್ಯವ್ಯಾಪ್ತಿ ವಿಸ್ತರಿಸುವ ದೃಷ್ಟಿಯಿಂದ ಸಣ್ಣ ಉದ್ದಿಮೆ ಆಹಾರ ಸಂಸ್ಕರಣಾ ಘಟಕಗ¼ನ್ನು ಸ್ಥಾಪಿಸುವ ಮೂಲಕ ಸಿಗುವ ಸಾಲ-ಸೌಲಭ್ಯ ಪಡೆದುಕೊಂಡು ಪ್ರಗತಿ ಸಾಧಿಸುವಂತೆ ತಿಳಿಸಿದ ಅವರು, ಈ ಬಗ್ಗೆ ಸಂಬAಧಿಸಿದ ಇಲಾಖೆಗಳು ಪೂರಕ ಮಾಹಿತಿ ಒದಗಿಸುವಂತೆ ಬ್ಯಾಂಕಗಳು ಅರ್ಹರಿಗೆ ಸಾಲ ಸೌಲಭ್ಯ ಒದಗಿಸಿ ಈ ಯೋಜನೆಯ ಲಾಭ ಅರ್ಹರಿಗೆ ತಲುಪಿಸುವಂತೆ ಅವರು ಹೇಳಿದರು.
ಜಿಲ್ಲೆಯಲ್ಲಿ ದ್ರಾಕ್ಷಿ, ದಾಳಿಂಬೆ, ಲಿಂಬೆ, ಬಿಳಿಜೋಳ ಹಾಗೂ ವಾಣಿಜ್ಯ ಬೆಳೆಗಳು ಸೆರಿದಂತೆ ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತದೆ. ರೈತರು ತಮ್ಮ ವ್ಯವಸಾಯದೊಂದಿಗೆ ಕಿರು ಆಹಾರ ಧಾನ್ಯ ಘಟಕಗಳ ಉದ್ದಿಮೆಗಳನ್ನು ಸ್ಥಾಪಿಸುವ ಮೂಲಕ ಉದ್ದಿಮೆದಾರರಾಗಿ ತಾವುಗಳು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಿದ ಅಭಿವೃದ್ಧಿ ಹೊಂದಲು ಸಾಧ್ಯವಿದ್ದು, ಈ ಕುರಿತು ಚಿಂತನೆ ಅಗತ್ಯ ಎಂದು ಅವರು ಹೇಳಿದರು.
ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ಯೋಜನೆ ಒಂದು ಉತ್ತಮ ಯೋಜನೆಯಾಗಿದೆ. ಫಲಾನುಭವಿಗಳಿಗೆ ಜಿಲ್ಲೆಯ ರೈತರು, ಸ್ವಸಹಾಯ ಗುಂಪುಗಳು, ವೈಯಕ್ತಿಕ ಉದ್ದಿಮೆದಾರರು, ಮಾಲಿಕತ್ವ ಸಂಸ್ಥೆಗಳು, ಪಾಲುದಾರಿಕೆ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು, ರೈತ ಉತ್ಪಾದಕ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು ಇದರಿಂದ ರೈತರಿಗೂ, ಬ್ಯಾಂಕುಗಳಿಗೂ ಹಾಗೂ ಮಹಿಳಾ ಸಂಘಗಳಿಗೂ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.
ಬೆಂಗಳೂರಿನ ಕೆಪೆಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಸಿ.ಎನ್.ಶಿವಪ್ರಕಾಶ ಮಾತನಾಡಿ ೧೮ ವರ್ಷ ಮೇಲ್ಪಟ್ಟವರು ಈ ಯೋಜನೆಯ ವ್ಯಾಪ್ತಿಗೆ ಬರಲಿದ್ದಾರೆ. ಈ ಯೋಜನೆಗೆ ಯಾವುದೇ ವಿದ್ಯಾರ್ಹತೆ ಅವಶ್ಯಕತೆ ಇಲ್ಲ. ತಾವು ಬೆಳೆದ ಬೆಳೆಗಳÀನ್ನು ಸಂಸ್ಕರಿಸಿ ವಿವಿಧ ಬಗೆಯ ಉತ್ಪನ್ನಗಳನ್ನು ತಯಾರಿಸಿ ಒಂದು ಉದ್ದಿಮೆಯಾಗಿ ಮಾರ್ಪಡಿಸಿದಲ್ಲಿ ಹೆಚ್ಚು ಲಾಭ ಪಡೆಯಬಹುದು. ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಸಿರಿಧಾನ್ಯ, ಎಣ್ಣೆಗಾಣ, ಬೆಲ್ಲದ ಘಟಕಗಳು, ಮಸಾಲೆ ಪದಾರ್ಥಗಳಂತಹ ೩ ರಿಂದ ೪ ಕಿರು ಆಹಾರ ಸಂಸ್ಕರಣೆಗಳ ಘಟಕಗಳನ್ನು ಸ್ಥಾಪಿಸುವುದರಿಂದ ಉದ್ಯೋಗ ಲಭಿಸಲಿವೆ. ಆದ್ದರಿಂದ, ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ಯೋಜನೆ ಕುರಿತು ಜನರಿಗೆ ಜಾಗೃತಿ ಮೂಡಿಸಬೇಕು ಹಾಗೂ ಪ್ರತಿಯೊಬ್ಬರಿಗೂ ಈ ಯೋಜನೆ ಮಾಹಿತಿ ಲಭಿಸುವಂತಾಗಬೇಕು ಎಂದು ಅವರು ಹೇಳಿದರು.
ಕೃಷಿ ಮಹಾವಿದ್ಯಾಲಯದ ಆಹಾರ ವಿಜ್ಞಾನ ಮತ್ತು ಪೋಷಣೆ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಕಾಶಿಬಾಯಿ ಖ್ಯಾಡಗಿ ಮಾತನಾಡಿ, ಜಿಲ್ಲೆಯ ಇಂಡಿ ತಾಲೂಕಿನಾದ್ಯಂತ ರೈತರು ಹೆಚ್ಚು ಲಿಂಬೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು ಲಿಂಬೆಯಿಂದ ಪರ್ಯಾಯವಾಗಿ ಜ್ಯೂಸ್, ಉಪ್ಪಿನಕಾಯಿ ಉಪಉತ್ಪದಾನೆಗಳಲ್ಲಿ ತೊಡಗಿದಲ್ಲಿ ಹೆಚ್ಚು ಆದಾಯ ಮೂಲವಾಗಬಲ್ಲದು ಲಿಂಬೆ ಸಿಪ್ಪೆಗಳಲ್ಲಿ ವೈಜ್ಞಾನಿಕವಾಗಿ ಔಷಧೀಯ ಗುಣ ಹೊಂದಿದ್ದು ಅದರಿಂದ ವಿವಿಧ ಬಗೆಯ ಕ್ಯಾಂಡಿ, ಸ್ವೀಟ ಕ್ಯಾಂಡಿ ಹಾಗೂ ಪೌಡರಗಳನ್ನು ತಯಾರಿಸಬಹುದಾಗಿದೆ. ಇದರಿಂದ ಪೌಷ್ಟಿಕತೆ ಹೆಚ್ಚುತ್ತದೆ ಹಾಗೂ ಮೌಲ್ಯವರ್ಧಿತ ಗುಣಗಳನ್ನು ಹೊಂದಿದೆ. ಯಾವುದೇ ಉತ್ಪನ್ನಗಳನ್ನು ತಯಾರಿಸುವಲ್ಲಿ ಸ್ವಚ್ಚತೆಗೆ ಹೆಚ್ಚು ಗಮನ ನೀಡಬೇಕು ಎಂದು ಅವರು ತಿಳಿಸಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ ಮಾತನಾಡಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ಯೋಜನೆ ಸ್ವಂತ ಉದ್ಯೋಗ ಹೊಂದಲು ಬಹಳ ಅನುಕೂಲವಾಗಲಿದೆ. ರೈತರು ಬೆಳೆದಂತಹ ವಸ್ತುಗಳನ್ನು ಮೌಲ್ಯವರ್ಧನೆ ಮಾಡಿ ಮಾರಾಟ ಮಾಡಿದಲ್ಲಿ ಒಳ್ಳೆಯ ಲಾಭ ಸಿಗಲಿದೆ. ರೈತರು, ಮಹಿಳಾ ಸ್ವಸಹಾಯ ಗುಂಪುಗಳು, ಉದ್ದಿಮೆದಾರರು ಹೆಚ್ಚು ಪಾಲ್ಗೊಳ್ಳುವುದರೊಂದಿಗೆ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು.
ಕಾರ್ಯಕ್ರಮದ ಮುಂಚೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ವಿವಿಧ ಬಗೆಯ ಆಹಾರ ಉತ್ಪನ್ನಗಳ ಮಳಿಗೆಯನ್ನು ವೀಕ್ಷಿಸಿದರು. ಕಾರ್ಯಾಗಾರದಲ್ಲಿ ಕೆಪೆಕ್ ಸಂಸ್ಥೆ ಸಮಾಲೋಚಕರಾದ ವಿಘ್ನೇಶ ಗಾಯತೊಂಡೆ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಅಗ್ರಣೀಯ ಬ್ಯಾಂಕ ವ್ಯವಸ್ಥಾಪಕರಾದ ಬಿ.ಸಿದ್ದಯ್ಯ ಯೋಜನೆಯಡಿ ಸಾಲ ಸೌಲಭ್ಯಗಳ ಅವಕಾಶಗಳ ಕುರಿತು ವಿವರಣೆ ನೀಡಿದರು. ಉಪ ಕೃಷಿ ನಿರ್ದೇಶಕ ಚಂದ್ರಕಾAತ ಪವಾರ ಸ್ವಾಗತಿಸಿದರು. ಉಪ ಕೃಷಿ ನಿರ್ದೇಶಕರಾದ ಶರಣಗೌಡ ರಂಗನಗೌಡ ವಂದಿಸಿದರು. ಜಿಲ್ಲೆಯ ವಿವಿಧ ಗ್ರಾಮಗಳ ಉದ್ದಿಮೆದಾರರು, ಸ್ವಸಹಾಯ ಗುಂಪಿನ ಸದಸ್ಯರು, ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.



















