ರೈತರು ನೀರು ನಿರ್ವಹಣೆ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ವಿಧಾನ’ ಗಳನ್ನು ಅರಿಯಬೇಕು
ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ: ರೈತರು ನೀರು ನಿರ್ವಹಣೆ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ವಿಧಾನ’ ಗಳನ್ನು ಅರಿಯಬೇಕು. ಅಲ್ಲದೆ, ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಸ್ವಾವಲಂಬಿಗಳಾಗಬೇಕು ಎಂದು ಕೆಎಸ್ ಡಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್. ನಾಡಗೌಡ (ಅಪ್ಪಾಜಿ) ಹೇಳಿದರು.
ತಾಲೂಕಿನ ಮುದೂರು ಗ್ರಾಮದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಸದಸ್ಯರು, ಪದಾಧಿಕಾರಿಗಳು ಹಾಗೂ ರೈತರಿಗೆ ಇತ್ತೀಚೆಗೆ ಹಮ್ಮಿಕೊಂಡಿದ್ದ ಸಮಗ್ರ ಕ್ಷಣೆ ಹಾಗೂ ಸವಳು-ಜವಳು ನಿರ್ವಹಣೆ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದ ನೀರು ಮತ್ತು ಮಣ್ಣು ಸಂರಕ್ಷಣೆ.ರೈತರು ಬೇಗ ಬೆಳೆ ತೆಗೆಯುವ ವ್ಯವಸ್ಥೆಗೆ ಜೋತು ಬಿದ್ದು ರಸಾಯನಿಕ ಗೊಬ್ಬರ ಬಳಕೆಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಅದರಿಂದ ಮಣ್ಣಿನ ಸತ್ತ ಕುಸಿತಗೊಂಡು ಬೆಳೆ ಕೂಡ ಕಳೆದುಕೊಳ್ಳುವ ಸ್ಥಿತಿ ಎದುರಿಸಿ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಅಲ್ಲದೆ, ಅಗತ್ಯಕ್ಕೆ ತಕ್ಕಂತೆ ನೀರು ಬಳಸದೇ ಹೆಚ್ಚು ನೀರು ಬಳಸುವುದರಿಂದ ಭೂಮಿ ಸವಳು ಜವಳು ಆಗುತ್ತಿದೆ ಎಂದು ಮಾಹಿತಿ ನೀಡಿದರು.
ಇವೆಲ್ಲ ಸಮಸ್ಯೆಗಳ ಕುರಿತು ಧಾರವಾಡದ ಜಲ ಮತ್ತು ನೆಲ ನಿರ್ವಹಣೆ (ವಾಲ್ಮೀ) ಸಂಸ್ಥೆಯು ರೈತರಿಗೆ ಉತ್ತಮ ಹಾಗೂ ಪರಿಣಾಮಕಾರಿ ತರಬೇತಿ ನೀಡುತ್ತಿದೆ. ಪ್ರತಿಯೊಬ್ಬ ರೈತರು ನೀರು ನಿರ್ವಹಣೆ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ವಿಧಾನ ಅರಿತು, ಸಾವಯವ ಕಕೃಷಿ ಪದ್ಧತಿ ರೂಢಿಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಧಾರವಾಡದ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ ನಿರ್ದೇಶಕ ಡಾ.ಗಿರೀಶ ಮರಡ್ಡಿ ಮಾತನಾಡಿ, ಜಲಾಶಯದ ನೀರಿನ ಸಮರ್ಪಕ ಬಳಕೆಯಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಪಾತ್ರ ಅತೀ ಮುಖ್ಯವಾಗಿದೆ. ಅಲ್ಲದೆ, ಅಚ್ಚುಕಟ್ಟು ಪ್ರದೇಶದಲ್ಲಿ ಕೃಷಿ ತಾಂತ್ರಿಕತೆಗಳ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಕಾಡಾ ಅಧ್ಯಕ್ಷ ಬಸವರಾಜ ಕುಂಬಾರ,ರಾಮ ಕುಲಕರ್ಣಿ, ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ. ಬಿರಾದಾರ, ಸುರೇಶ್ ಹಳಿಮನಿ,ಸಂತೋಶ ರಾಠೋಡ ಸೇರಿದಂತೆ ಉಪಸ್ಥಿತರಿದ್ದರು.