ರೈತರ ಮೇಲಿನ ಹಲ್ಲೆ ಖಂಡಿಸಿ, ರೈತ ಸಂಘದಿಂದ ಪ್ರತಿಭಟನೆ
ಹನೂರು :ತಾಲೂಕಿನ ಜಲ್ಲಿಪಾಳ್ಯ ಗ್ರಾಮದಲ್ಲಿ ಗುರುವಾರ ರೈತರ ಮೇಲೆ ಹಾಗೂ ಮಹಿಳೆ ಮೇಲೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆ ಹೂಗ್ಯಂ ಗ್ರಾಮ ಅರಣ್ಯ ಇಲಾಖೆ ಅಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ರವರು ಮಾತನಾಡಿ ರೈತರ ಮೇಲೆ ಹಲ್ಲೆ ನಡೆಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಮೇಲೆ ಕಾನೂನು ಕ್ರಮವಾಗಬೇಕು. ಪೊಲೀಸ್ ಠಾಣೆ ಯಲ್ಲಿ ಅವರ ವಿರುದ್ಧ ಎಫ್ ಐ ಆರ್ ದಾಖಲು ಮಾಡಿ,ಕರ್ತವ್ಯದಿಂದ ವಜಾಗೊಳಿಸಬೇಕು.ಅವರ ವಿರುದ್ಧ ಮಾನವ ಹಾಗೂ ಮಹಿಳಾ ಆಯೋಗಕ್ಕೆ ದೂರು ನೀಡಲಾಗುವುದು.
ಇನ್ನ ಎರಡು ದಿನಗಳಲ್ಲಿ ರೈತರ ಪ್ರತಿಭಟನಾ ಸ್ಥಳಕ್ಕೆ ಡಿ ಎಫ್ ಓ ರವರು ಸ್ಥಳಕ್ಕೆ ಬಂದು ಸಮಸ್ಯೆಯನ್ನ ಬಗೆಹರಿಸದಿದ್ದಲ್ಲಿ, ಚಾಮರಾಜನಗರ, ಮಂಡ್ಯ, ರಾಮನಗರ ಹಾಗೂ ಮೈಸೂರು ಜಿಲ್ಲೆಗಳಿಂದ ರೈತ ಸಂಘದ ಪದಾಧಿಕಾರಿಗಳು ಡಿ ಎಫ್ ಓ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದರು.
ಎರಡು ದಿನಗಳಿಂದಲೂ ರೈತರು ಪ್ರತಿಭಟನೆ ನಡೆಸುತಿದ್ದರು, ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಬಾರದ ಕಾರಣ ಪ್ರತಿಭಟನೆ ಮುಂದುವರೆಸಿದ್ದಾರೆ.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಎ ಮಹೇಶ್ ಪ್ರಭು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸರ್ವೋದಯ ಪಕ್ಷದ ರಾಜ್ಯ ಪ್ರಧಾನ ಕಾಯದರ್ಶಿ ಪ್ರಸನ್ನ ಗೌಡ, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಗೌಡೇ ಗೌಡ, ಹನೂರು ತಾಲೂಕು ಅಧ್ಯಕ್ಷ ಅಮ್ಜದ್ ಖಾನ್, ರವಿನಾಯ್ಡು, ರಾಜೇಂದ್ರ, ಅರ್ಪುದ ರಾಜ್, ಕಾಶಿಗೌಡ, ಈರಣ್ಣ, ಹುಚ್ಚಯ್ಯ, ಮಹಾದೇವ್, ಮುನಿಸ್ವಾಮಿ, ಪಳನಿ ಸ್ವಾಮಿ,ಕೃಷ್ಣ, ವೆಂಕಟೇಶ್, ರಾಜಮಣಿ,ವಿವಿಧ ಗ್ರಾಮದ ಪದಾಧಿಕಾರಿಗಳು, ಗ್ರಾಮಸ್ಥರು ಇದ್ದರು.
ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲ್ಲೂಕು, ಚಾಮರಾಜನಗರ ಜಿಲ್ಲೆ.