ಶಿವಮೊಗ್ಗ : ಕೋಮು ಪ್ರಚೋದನೆ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ. ಭಜರಂಗ ದಳದ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಪಟ್ಟಂತೆ
ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಸಚಿವ
ಕೆ ಎಸ್ ಈಶ್ವರಪ್ಪ ವಿರುದ್ಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಆರ್‌ಐ ದಾಖಲಿಸಲಾಗಿದೆ.
ಶಿವಮೊಗ್ಗದ ರಿಯಾಜ್ ಅಹ್ಮದ್ ಎಂಬುವರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದೆ. ಹರ್ಷ ಹತ್ಯೆಯ ನಂತರ ಹಿಂಸಾಚಾರ ನಡೆದಿತ್ತು. ಸಚಿವ ಈಶ್ವರಪ್ಪ ಕೋಮು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ರಿಯಾಜ್ ಅಹ್ಮದ್ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಮೊದಲು ದೂರು ಸ್ವೀಕರಿಸಲು ಪೊಲೀಸರು ನಿರಾಕರಿಸಿದ್ದರು. ಹೀಗಾಗಿ ರಿಯಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ನಿರ್ದೇಶನದ ಮೇರೆಗೆ ಪೊಲೀಸರು ಪಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.