ಚವನಭಾವಿ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ತೆಂಗಿನ ಮರಕ್ಕೆ ಬೆಂಕಿ ಜ್ವಾಲೆ
ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ವಿಜಯಪುರ : ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಚವನಭಾವಿ ಗ್ರಾಮದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿ ಜ್ವಾಲೆ ಹೊತ್ತಿಕೊಂಡ ಘಟನೆ ನಡೆದಿದೆ.
ತಾಲ್ಲೂಕಿನ ಚವನಭಾವಿ ಗ್ರಾಮದಲ್ಲಿ ಬಾರಿ ಬಿರುಗಾಳಿ ಮಳೆಗೆ ರೈತ ಸಿದ್ದಪ್ಪ ಉಂಡಿ ಎಂಬವರಿಗೆ ಸೇರಿದ ಹೊಲದಲ್ಲಿನ ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿ ಜ್ವಾಲೆ ಕಾಣಿಸಿಕೊಂಡಿದೆ. ಏಕಾಏಕಿ ನಡೆದ ಘಟನೆಯಿಂದಾಗಿ ರೈತ ಸಿದ್ದಪ್ಪ ಗಾಬರಿಗೊಂಡಿದ್ದಾರೆ ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.