ಇಂಡಿ : ಸಮಾಜ ಕಲ್ಯಾಣ ಇಲಾಖೆ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಕಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ. ಇನ್ನು ಅಭ್ಯಾಸ ಮತ್ತು ಗಣಕಯಂತ್ರದ ಕೊಠಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಆದ್ರೇ, ಇದು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಿದರು. ಇಂಡಿ ಶಹರ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ಸಂಭವಿಸಿದೆ.