ಮಹದೇಶ್ವರನ ಸನ್ನಿಧಿಯಲ್ಲಿ ಅಗ್ನಿ ಅವಘಡ..!
ಹನೂರು : ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಾದಪ್ಪನ ಬೆಟ್ಟದಲ್ಲಿ ಅಗ್ನಿ ಅವಘಡ ಲಾಡು ತಯಾರಿಕ ಕೇಂದ್ರದಲ್ಲಿ ನಡೆದಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ತಿಳಿಸಿದರು .
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರದಂದು ಅಗ್ನಿ ಅವಘಡ ಸಂಭವಿಸಿದೆ. ದೇವಸ್ಥಾನದ ಬಳಿ ಇರುವ ಲಾಡು ಪ್ರಸಾದ ತಯಾರಿಕಾ ಘಟಕಕ್ಕೆ ಬೆಂಕಿ ಬಿದ್ದಿರುವ ಘಟನೆ ಮಧ್ಯಾಹ್ನ ವೇಳೆ ನಡೆದಿದ್ದು, ಪ್ರಾಧಿಕಾರದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಘಟಕದಲ್ಲಿರುವ ಸಿಲಿಂಡರ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಇದನ್ನು ನಂದಿಸುವುದರೊಳಗೆ ಘಟಕದಲ್ಲಿ ಸಿಹಿ ಜಿಡ್ಡು ಹಾಗೂ ಎಣ್ಣೆ ಪದಾರ್ಥ ಇದ್ದ ಪರಿಣಾಮ ಎಲ್ಲೆಡೆ ಬೆಂಕಿ ಆವರಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಅಪಾರ ಪ್ರಮಾಣದ ಲಾಡು ತಯಾರಿಕ ಸಾಮಗ್ರಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಸದ್ಯ ಈ ಸಂದರ್ಭದಲ್ಲಿ ಲಾಡು ಪ್ರಸಾದ ತಯಾರಿಕಾ ಘಟಕದಲ್ಲಿ – ದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಪ್ರಾಧಿಕಾರದ ಕಾರ್ಯದರ್ಶಿಗಳಾದ ಸರಸ್ವತಿ ಮಾತನಾಡಿ ಅದೃಷ್ಟ – ವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಈ ಮೊದಲು ಸಹ ಘಟನೆ ನಡೆದಿದ್ದು ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಮರುಕುಳಿಸದಂತೆ ನೋಡಿಕೊಳ್ಳ – ಲಾಗುವುದು ಎಂದರು.