ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸ: ಅವಧಿ ವಿಸ್ತರಣೆ
ವಿಜಯಪುರ, ಜೂನ್ 19 Voice of janata :
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಂದ 2024-25ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ, ಅಟೊಮೊಬೈಲ್, ಸಿವಿಲ್, ಮೆಕ್ಯಾನಿಕಲ್, ಇಂಜಿನಿಯರಿAಗ್ ವಿಭಾಗಗಳಲ್ಲಿ ಖಾಲಿ ಉಳಿದಿರುವ ಸೀಟುಗಳ ಪ್ರವೇಶಕ್ಕಾಗಿ ಜೂನ್ 15ರವರೆಗಿದ್ದ ಕೊನೆಯ ದಿನಾಂಕದ ಅವಧಿಯನ್ನು ಜೂನ್ 29ರವರೆಗೆ ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸರಕಾರಿ ಪಾಲಿಟೆಕ್ನಿಕ ವಿಭಾಗದ ಕಾರ್ಯನಿರ್ವಾಹಕರನ್ನು ಸಂಪರ್ಕಿಸಬಹುದು ಎಂದು ಪ್ರಾಚಾರ್ಯರಾದ ಬಸವರಾಜ ಬಿ. ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.