ಲಿಂಗಸುಗೂರು : ರಸ್ತೆ ಅಪಘಾತದಲ್ಲಿ ಮೃತಪಟ್ಟ ಪತಿಯ ಸಾವಿನ ಸುದ್ದಿ ತಿಳಿದು ಪತ್ನಿ 5 ತಿಂಗಳ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಪಟ್ಟಣದಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿನ ಕನಕದಾಸ ಕಾಲೇಜು ಬಳಿಯಿರುವ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆಯಲ್ಲಿ ಶೃತಿ (30), ಅಭಿಷೇಕ(5 ತಿಂಗಳು) ಹಸುಗೂಸು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಂಗಳೂರು ಜಿಲ್ಲೆಯ ಅಗ್ನಿಶಾಮಕ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಪತಿ ಗಂಗಾಧರ ನಿನ್ನೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಈ ಸುದ್ದಿ ತಿಳಿದು ಆಘಾತಕ್ಕೊಳಗಾಗಿ ಮನನೊಂದು ಮನೆಯಲ್ಲಿನ ಕೊಣೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾರೆ. ಇನ್ನೂ ಐದು ತಿಂಗಳು ಹಸುಗೂಸಿಗೂ ನೇಣು ಬಿಗಿದ್ದಾಳೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಲಿಂಗಸೂಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.