ಪ್ರವಾಹ ಪರಿಸ್ಥಿತಿ ಹಿನ್ನೆಲೆ ಜಿಲ್ಲಾಧಿಕಾರಿ ಪರಿಶೀಲನೆ
ವಿಜಯಪುರ : ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ಇಂದು ಮುದ್ದೇಬಿಹಾಳ ತಾಲೂಕಿನ ಕಾಳಗಿ, ಮುದೂರ ಹಾಗೂ ನಿಡಗುಂದಿ ತಾಲೂಕಿನ ಮಸೂತಿ ಹಾಗೂ ಯಲಗೂರಕ್ಕೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮುದ್ದೇಬಿಹಾಳ ತಾಲೂಕಿನ ನೋಡಲ್ ಅಧಿಕಾರಿಗಳಾದ ಶಂಕರಗೌಡ ಸೋಮನಾಳ,ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ತಹಶೀಲ್ದಾರರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.


















