ಸಲಹಾ ಸಮಿತಿ ರಚಿಸಿ, ಕಾಲುವೆಗಳಿಗೆ ನೀರು ಹರಿಸಬೇಕು; ಶಾಸಕ ಯಶವಂತರಾಯಗೌಡ ಪಾಟೀಲ..
ಇಂಡಿ : ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ರಚಿಸಿ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಅವರು ಉಪಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ವಾಡಿಕೆಯಂತೆ ಪ್ರತಿವರ್ಷ ಜುಲೈ 15 ಕ್ಕೆ ಕಾಲುವೆಗಳಿಗೆ ಹರಿಸುವುದು ಸಾಂಪ್ರದಾಯವಾಗಿರುತ್ತದೆ. ಆದರೆ ಪಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಕಾಲುವೆಗಳಿಗೆ ಇಲ್ಲಿಯವರೆಗೆ ನೀರು ಹರಿಸಿರುವುದಿಲ್ಲ. ಆದರೆ ಪ್ರಸ್ತುತವಾಗಿ ಮಹಾರಾಷ್ಟ್ರ ಭಾಗದಲ್ಲಿ ಯಥೇಚ್ಛವಾಗಿ ಮಳೆ ಸುರಿಯುತ್ತಿದ್ದು ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಆ ಕಾರಣಕ್ಕಾಗಿ ತುರ್ತಾಗಿ ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಐ.ಸಿ.ಸಿ ರಚಿಸುವಂತೆ ಹಾಗೂ ನೀರಾವರಿ ಸಲಹಾ ಸಮಿತಿ ಸಭೆಯನ್ನು ಕರೆಯಲು ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಶಾಸಕ ಯಶವಂತರಾಯಗೌಡ ಪಾಟೀಲ ಮನವಿ ಮಾಡಿದ್ದಾರೆ.
ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರನ್ನು ಈವರೆಗೆ ನೇಮಕಾತಿ ಮಾಡಿಲ್ಲ. ಹಾಗಾಗಿ ಕೂಡಲೇ ಸಲಹಾ ಸಮಿತಿ ರಚಿಸಲು ಮನವಿ ಮಾಡಿದ್ದಾರೆ.