ಇಂಡಿ : ಜಮೀನಿನಲ್ಲಿ ಕೆಲಸ ಮಾಡುವಾಗ ಹಾವು ಕಡಿತದಿಂದ ಮಹಿಳೆ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ರೈತ ಮಹಿಳೆ ಲಕ್ಷ್ಮೀಬಾಯಿ ವಿಠೋಬಾ ಪೂಜಾರಿ ಮೃತಪಟ್ಟಿರುವ ದುರ್ದೈವಿ. ಇನ್ನೂ ವಿಷಪುರೀತ ಹಾವು ಕಡಿತದಿಂದ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಅದಕ್ಕಾಗಿ ಸಂಬಂಧಪಟ್ಟ ಇಲಾಖೆ ಮೃತ ಮಹಿಳೆಗೆ 10ಲಕ್ಷ ಪರಿಹಾರ ನೀಡಬೇಕು ಎಂದು ಜೆಡಿಎಸ್ ಮುಖಂಡ ಬಿ ಡಿ ಪಾಟೀಲ ಆಗ್ರಹಿಸಿದ್ದಾರೆ. ಮೃತ ಮಹಿಳೆಗೆ ಮೂವರು ಹೆಣ್ಣು ಮಕ್ಕಳು ಇಬ್ಬರು ಗಂಡು ಮಕ್ಕಳು ಇದ್ದು ಕಡು ಬಡ ಕುಟುಂಬದವರಾಗಿದ್ದಾರೆ. ಕೂಡಲೆ ಸಂಬಂಧಿಸಿದ ಅಧಿಕಾರಿಗಳು ಸುಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಹೊರ್ತಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.