ವಿಜಯಪುರ : ಸಾಲಬಾಧೆ ತಾಳಲಾರದೆ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ವಿಜಯಪುರದ ರೇಶ್ಮಿ ಕಾಲೋನಿಯಲ್ಲಿ ನಡೆದಿದೆ. ಆಲಮೇಲ ನಿವಾಸಿ ಸೈಬಣ್ಣ ಶಂಕರ ಓಲೇಕಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನು ಜಮೀನಿನಲ್ಲಿ ಬಿತ್ತನೆ ಹಾಗೂ ಕೃಷಿ ಚಟುವಟಿಕೆಗಳಿಗ ಸಾಲ ಮಾಡಿಕೊಂಡಿದ್ದನು. ಅದಕ್ಕಾಗಿ ಸಾಲಬಾಧೆ ತಾಳಲಾರದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಈ ಕುರಿತು ಗೋಳಗುಮ್ಮಟ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.