ಇಂಡಿ : ಸಾಲಭಾದೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಭೈರುಣಗಿ ಗ್ರಾಮದಲ್ಲಿ ನಡೆದಿದೆ. 59 ವರ್ಷದ ಕಲ್ಲಪ್ಪ ಬಿರಾದಾರ ಮೃತಪಟ್ಟಿರುವ ದುರ್ದೈವಿ. ಇನ್ನು ಬ್ಯಾಂಕ್ ಸೇರಿದಂತೆ ವಿವಿಧ ಕಡೆಗೆ ಕೈಗಡವಾವಿ ಲಕ್ಷಾಂತರ ನಗದು ಸಾಲ ಮಾಡಿಕೊಂಡಿದ್ದರು. ಅದಕ್ಕಾಗಿ ಸಾಲಕ್ಕೆ ಭಯಪಟ್ಟು ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.