ಮಸ್ಕಿ: ಪ್ರಕೃತಿ ಫೌಂಡೇಶನ್ (ರಿ) ಮಸ್ಕಿ ವತಿಯಿಂದ ಇಂದು ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರ ಶಾಖಾ ಗ್ರಂಥಾಲಯ ಮಸ್ಕಿಯಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಟ್ಟು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಪ್ರಕೃತಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರಾದ ಶಿವಮೂರ್ತಿ ಗದ್ಗಿಮಠ, ಗ್ರಂಥಾಲಯ ಸಹಾಯಕರು ಸೋಮಶೇಖರ ಎಸ್, ಗೌರಿ ಬಸವರಾಜ, ನಾಗಾರ್ಜುನ, ರಾಜು, ಕುಮಾರ್, ಅರುಣ್, ಮತ್ತಿತರರು ಉಪಸ್ಥಿತರಿದ್ದರು.