ನಾಲ್ಕು ಜನ ಬೈಕ್ ಕಳ್ಳರ ಬಂಧನ..!
ವಿಜಯಪುರ : ನಾಲ್ಕು ಜನ ಬೈಕ್ ಕಳ್ಳರನ್ನು ಬಂಧಿಸಿ, ಲಕ್ಷಾಂತರ ಮೌಲ್ಯದ ಬೈಕ್ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಎಸ್ಪಿ ಋಷಿಕೇಸ್ ಸೋನವಾಣೆ ಹೇಳಿದರು. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಮಾತನಾಡಿದ ಅವರು, ಬಸವರಾಜ ಹುಣಸಿಗಿಡದ, ಹುಲುಗಪ್ಪ ಕೂಕಲೋರ, ಕೊಂಡಯ್ಯ ಪಾರ್ವತಿದೊಡ್ಡಿ, ರವಿಕುಮಾರ ಪಾರ್ವತಿದೊಡ್ಡಿ ಬಂಧಿತ ಆರೋಪಿಗಳು. ಇನ್ನು ಆರೋಪಿಗಳು ಯಂಕಂಚಿ ಬೈಪಾಸ್ ಬಳಿ ಸಂಶಯಾಸ್ಪದವಾಗಿ ಎರಡು ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಪೊಲೀಸರು ದಾಳಿಗೈದು, ತನಿಖೆ ನಡೆಸಿ ವಿಜಯಪುರ, ಕಲಬುರಗಿ ಸೇರಿದಂತೆ ವಿವಿಧ ಕಡೆಗೆ ಕಳ್ಳತನ ಮಾಡಿದ 16 ಲಕ್ಷದ 65 ಸಾವಿರ ಮೌಲ್ಯದ 37 ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು.