ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ
Voice Of Janata News :Bangalore :
ಮಾ. 1ರಿಂದ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಗಳು ಆರಂಭವಾಗುತ್ತಿದ್ದು, ಬೆಂಗಳೂರಿನ ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ಬಿಎಂಟಿಸಿ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತದೃಷ್ಟಿಯಿಂದ ಮಾ. 1ರಿಂದ 22ರವರೆಗೆ ಪರೀಕ್ಷೆಗೆ ಹಾಜರಾಗುವ ఎల్ల ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ಅಲ್ಲಿಂದ ಮನೆಗೆ ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ನಿರ್ವಾಹಕರಿಗೆ ತೋರಿಸಿ, ಟಿಕೆಟ್ ಪಡೆಯದೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಬಿಎಂಟಿಸಿ ವೋಲ್ಲೋ ಹೊರತುಪಡಿಸಿ ಇನ್ನುಳಿದ ಎಲ್ಲಾ ಬಿಎಂಟಿಸಿ ಬಸ್‌ನಲ್ಲಿ ಮನೆಯಿಂದ ಪರೀಕ್ಷಾ ಕೊಠಡಿ ವರೆಗೆ ಉಚಿತವಾಗಿ ಪ್ರಯಾಣಿಸಬಹದು.ವಿದ್ಯಾರ್ಥಿಗಳ ಅನುಕೂಲಕ್ಕೆ ಪರೀಕ್ಷಾ ಕೇಂದ್ರಗಳ ಮುಂದೆಯೇ ಸ್ಟಾಪ್ ಕೊಡಲು ಚಾಲಕ ಹಾಗೂ ನಿರ್ವಹಕರಿಗೆ ಸೂಚನೆ ನೀಡಲಾಗಿದ್ದು. ಇನ್ನು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಗಳ ರೂಟ್ ನಲ್ಲಿ ಹೆಚ್ಚುವರಿ ಬಸ್ ಬಿಡಲು ಬಿಎಂಟಿಸಿ ಚಿಂತನೆ ನಡೆಸಿದೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಹಾಲ್‌ಟಿಕೆಟ್ ತೋರಿಸಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಬಹುದು.
ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 01 ರಿಂದ 22ರವರೆಗೆ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 25ರಿಂದ ಏಪ್ರಿಲ್ 06ರವರೆಗೆ ನಡೆಯಲಿವೆ. ಈ ವರ್ಷ ರಾಜ್ಯದಲ್ಲಿ 8,96,271 ಮಕ್ಕಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪರೀಕ್ಷೆ ಬರೆಯತ್ತಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ. ಇನ್ನು 6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ.