ಡಿ.29 ರಂದು ದನಗಳ ಉಚಿತ ಆರೋಗ್ಯ ತಪಾಸಣೆ
ಇಂಡಿ : ತಾಲೂಕಿನ ಭತಗುಣಕಿ ಗ್ರಾಮದಲ್ಲಿ ಡಿ.೨೯ ರಂದು ಬೆಳಗ್ಗೆ ೧೦ ಗಂಟೆಯಿಂದ ಜಾನುವಾರುಗಳ ಉಚಿತ ಆರೋಗ್ಯ ತಪಾಸಣೆ ನಡೆಯಲಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಡಾ. ಹೀನಾ ತಿಳಿಸಿದ್ದಾರೆ.
ಕೃಷಿ ವಿಜ್ಞಾನ ಕೇಂದ್ರ ಇಂಡಿ, ಪಶುಪಾಲನಾ ಇಲಾಖೆ ಇಂಡಿ ಹಾಗೂ ವಿಜಯಪುರ ಬಾಗಲಕೋಟ ಸಹಕಾರಿ ಹಾಲು ಉತ್ಪಾದಕರ ಸಂಘ ಇಂಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ.
ಕರುಗಳ ಪ್ರದರ್ಶನ, ಜಾನುವಾರುಗಳ ಉಚಿತ ಆರೋಗ್ಯ ತಪಾಸಣೆ, ಹೈನುಗಾರಿಕೆ ಕುರಿತು ಚರ್ಚಾಗೋಷ್ಠಿ ನಡೆಯಲಿದೆ ಎಂದು ಡಾ. ಹೀನಾ ತಿಳಿಸಿದ್ದಾರೆ.