ಮೂರಾರ್ಜಿ ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ
ಹನೂರು: ಹೋಲಿ ಕ್ರಾಸ್ ಆಸ್ಪತ್ರೆ ಕಾಮಗೆರೆ ವತಿಯಿಂದ ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. ಹೋಲಿ ಕ್ರಾಸ್ ಆಸ್ಪತ್ರೆಯ ಆಡಳಿತ ಅಧಿಕಾರಿ ಸಿಸ್ಟರ್ ಡೆಲಿನ್ ಮಾತನಾಡಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಹೋಲಿ ಕ್ರಾಸ್ ಆಸ್ಪತ್ರೆಯು ಹಲವು ವರ್ಷಗಳಿಂದ ತನ್ನದೇ ಆದ ಉಚಿತ ಆರೋಗ್ಯ ಸೇವೆಯನ್ನು ಒದಗಿಸುತ್ತ ಬಂದಿದೆ. ಸಮಾಜದಲ್ಲಿರುವ ಅತ್ಯಂತ ಬಡ ಮತ್ತು ಅಸಹಾಯಕ ಜನರು ಹಾಗೂ ಶಾಲಾ ಮಕ್ಕಳ ಆರೋಗ್ಯ ಕಾಪಾಡಲು ಇಂತಹ ಆರೋಗ್ಯ ತಪಾಸಣಾ ಶಿಬಿರಗಳನ್ನು ಆ ಯೋಜನೆ ಮಾಡುತ್ತಿದ. ಮಕ್ಕಳು ಗುಣಮಟ್ಟದ ಕಲಿಕೆಯ ಜೊತೆಗೆ ಉತ್ತಮ ಆರೋಗ್ಯವನ್ನು ಹೊಂದಬೇಕು ಎಂಬುದು ಹೋಲಿ ಕ್ರಾಸ್ ಸಂಸ್ಥೆಯ ಕಾಳಜಿಯಾಗಿದೆ. ಶಾಲಾ ಮಕ್ಕಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ವಸತಿ ಶಾಲೆಗಳಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.
ಹೋಲಿ ಕ್ರಾಸ್ ಆಸ್ಪತ್ರೆಯ ತಜ್ಞ ವೈದ್ಯ ದಾ ಡಾ.ದೇವ್ ಯಶ್ ರಾಣಾ ಹಾಗೂ ಆಸ್ಪತ್ರೆ ಸಿಬ್ಬಂದಿಗಳು ಶಿಬಿರದಲ್ಲಿ ವಸತಿ ಶಾಲೆಯ ಎಲ್ಲಾ ಮಕ್ಕಳಿಗೂ ಆರೋಗ್ಯ ತಪಾಸಣೆ ಮಾಡಿದರು.
ಇದೇ ವೇಳೆ ಶಾಲಾ ಮುಖ್ಯ ಶಿಕ್ಷಕ ಪ್ರಕಾಶ್ ರವರು ಹೋಲಿ ಕ್ರಾಸ್ ಆಸ್ಪತ್ರೆಯ ಸಿಬ್ಬಂದಿಗಳ ಸೇವಾ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.