ಎಸ್ ಎಸ್ ಎಲ್ ಸಿ ಪರೀಕ್ಷೆ ಕಾರ್ಯದಿಂದ
ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬಿಡುಗಡೆಗೊಳಿಸಿ..!
ಇಂಡಿ : ಪ್ರಾಥಮಿಕ ಶಾಲಾ ಶಿಕ್ಷಕರನ್ನು ಎಸ್ ಎಸ್ ಎಲ್ ಸಿ ಪರೀಕ್ಷೆಯಿಂದ ಕೈ ಬಿಡಬೇಕು ಎಂದು ಆಯುಕ್ತರ ಆದೇಶವಿದ್ದರೂ ಇಂದು ಶಿಕ್ಷಕರನ್ನು ಪರೀಕ್ಷೆಯ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು ಖಂಡಿಸುತ್ತೆವೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಇಂಡಿ ಸಂಘದ ವತಿಯಿಂದ ಕ್ಷೇತ್ರ ಶಿಕ್ಷಣ ಅಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.
ಮಂಗಳವಾರ ಪಟ್ಟಣದ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಛೇರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಸೇರಿ ಮನವಿ ಸಲ್ಲಿಸಿದರು.
2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳಬಾರದೆಂದು ಆಯುಕ್ತರ ಆದೇಶ ವಿದ್ದರೂ ಶಿಕ್ಷಕರನ್ನು ಪರೀಕ್ಷೆ ಕಾರ್ಯದಲ್ಲಿ ಬಳಸಿಕೊಂಡಿದ್ದು ಖಂಡಿಸುತ್ತೆವೆ. ಆದರೆ ಇಲಾಖೆ ಕಾರ್ಯ ಮಾಡುವಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕ ಸಂಘ ಯಾವಾಗಲೂ ಸ್ವಾಗತ ಬಯಸುತ್ತದೆ. ಆದರೆ ಸುತ್ತೊಲೆ ಪಾಲಿಸದೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕೊಠಡಿ ಮೇಲ್ವಿಚಾರಕರು ಅಂತ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಿಸಿ ಆದೇಶ ಮಾಡಿದ್ದು ಸಂಘ ಬಲವಾಗಿ ಖಂಡಿಸುತ್ತದೆ. ಆದ್ದರಿಂದ ಸದರಿ ಕಾರ್ಯದಿಂದ ಶಿಕ್ಷಕರನ್ನು ಬಿಡುಗಡೆ ಗೊಳಿಸಬೇಕೆಂದು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಎಸ್ ವಿ ಹರಳಯ್ಯ, ಕಾರ್ಯದರ್ಶಿ ಮಲ್ಲಿಕಾರ್ಜುನ ನೆದಲಗಿ, ವಾಯ್ ಟಿ ಪಾಟೀಲ, ಸಿ ಎಸ್ ಝಳಕಿ, ಕೋಳೆಕರ ಹಾಗೂ ಇನ್ನೂ ಅನೇಕರು ಉಪಸ್ಥಿತರಿದ್ದರು.