ವಿಜಯಪುರ : ತಾಜ್ ಬಾವಡಿಯಲ್ಲಿಯೇ ಗಣೇಶ ವಿಸರ್ಜನೆ ಮಾಡಬೇಕೆಂಬ ಹಠ ಇಲ್ಲ ಎಂದು ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಹೇಳಿದರು. ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಧಾರ್ಮಿಕ ಕಾರ್ಯಕ್ರಮಗಳಿಗೆ ತಾಜ್ ಬಾವಡಿಯಲ್ಲಿ ಅವಕಾಶ ಕಲ್ಪಿಸಿ ಎಂದು ಒತ್ತಾಯಿಸುತ್ತಿದ್ದಾರೆ. ಆದ್ರೇ, ನಗರ ಶಾಸಕರು ಕೇಸ್ ಹಾಕುತ್ತೇನೆ. ಗುಂಡಾ ಕಾಯ್ದೆ ಅಡಿ ಕೇಸ್ ದಾಖಲಿಸುತ್ತೇನೆ ಎನ್ನುತ್ತಿದ್ದಾರೆ. ಅದಕ್ಕಾಗಿ ಪೊಲೀಸ್ ಇಲಾಖೆ ಇವರನ್ನೇ ಗಂಭೀರವಾಗಿ ಪರಿಗಣಿಸಬೇಕೆಂದರು.
ನಮಗೇನು ಶಾಂತಿಭಂಗ ಮಾಡಬೇಕೆಂಬ ಉದ್ದೇಶ ಇಲ್ಲ ಎಂದರು.