ಕೃಷ್ಣೆಯ ಜಲಧಿಗೆ, ಮುಖ್ಯಮಂತ್ರಿಗಳಿಂದ ಗಂಗಾಪೂಜೆ ಮತ್ತು ಬಾಗಿನ ಅರ್ಪಣೆ
ವಿಜಯಪುರ: ಜಿಲ್ಲೆಯ ಆಲಮಟ್ಟಿ ಅಣೆಕಟ್ಟೆಯಲ್ಲಿ ಕೃಷ್ಣೆಯ ಜಲಧಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಗಂಗಾ ಪೂಜೆ ಮತ್ತು ಬಾಗಿನ ಅರ್ಪಿಸಿದರು.
ಈ ಸಂದರ್ಭ ಉಪ ಮುಖ್ಯಮಂತ್ರಿಗಳಾದ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆಯ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ,ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ,ಜವಳಿ, ಕಬ್ಬು ಅಭಿವೃದ್ಧಿ,ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಸೇರಿದಂತೆ ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.