ವಿಜಯಪುರ: ಆಕಸ್ಮಿಕ ಶಾರ್ಟ್ ಸರ್ಕ್ಯೂಟ್‌ನಿಂದ ಗ್ಯಾರೇಜ್ ಅಂಗಡಿ ಬೆಂಕಿಗಾಹುತಿ ಆಗಿರುವ ಘಟನೆ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದ ಪಕ್ಕದಲ್ಲಿ ನಡೆದಿದೆ. ಇನ್ನು ಏಕಾಏಕಿ ಶಾರ್ಟ್ ಸರ್ಕ್ಯೂಟ್‌ನಿಂದ ಗ್ಯಾರೇಜ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಇದರಿಂದ ಮತ್ತೊಂದು ಅಂಗಡಿಗೆ ಬೆಂಕಿ ಹತ್ತಿಕೊಂಡು ಎರಡು ಅಂಗಡಿಗಳು ಬೆಂಕಿಗಾಹುತಿ ಆಗಿವೆ. ಅಲ್ಲದೇ, ಸ್ಥಳೀಯರು ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.