ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ
ಇಂಡಿ: ಕರ್ನಾಟಕ ಜಾನಪದ ಅಕಾಡೆಮಿ ಬೆಂಗಳೂರು, ಭೀಮಾoತರಂಗ ಸಾಹಿತ್ಯಿಕ, ಸಾಂಸ್ಕೃತಿಕ ಜಗಲಿ ಕೇಂದ್ರ, ಇಂಡಿ, ಕರ್ನಾಟಕ ವಿದ್ಯಾವರ್ಧಕ ಸಂಸ್ಥೆ ಇಂಡಿ ಅವರ ಸಹಯೋಗದಲ್ಲಿ ಪಟ್ಟಣದ ಕರ್ನಾಟಕ ಬಿಎಡ್ ಕಾಲೇಜಿನಲ್ಲಿ ದಿ:07-08-2025 ರಂದು ಬೆಳಿಗ್ಗೆ 10 ಗಂಟೆಗೆ ಗೀಗಿ ಸಂಭ್ರಮ, ಸನ್ಮಾನ ಸಮಾರಂಭ, ಹರದೇಶಿ-ನಾಗೇಶಿ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಇಂಡಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಉದ್ಘಾಟಿಸುವರು. ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೊದ್ದಾರ, ಕರ್ನಾಟಕ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಬಸವರಾಜ ಕುಮಸಗಿ ಆಗಮಿಸುವರು.
ಬಾಗಲಕೋಟದ ಗೊಂದಲಿ ಪದ ಕಲಾವಿದರು, ಪದ್ಮಶ್ರೀ ಪ್ರಶಸ್ತಿ ವಿಜೇತ ಡಾ ವೆಂಕಪ್ಪ ಅಂಬಾಜಿ ಸುಗತೇಕರ ಸನ್ಮಾನಿತರಾಗಿ ಆಗಮಿಸುವರು.
ಗುಳೇದಗುಡ್ಡದ ವಿಶ್ರಾಂತ ಪ್ರಾಚಾರ್ಯ ಸಿ ಎಂ ಜೋಶಿ ಅಭಿನಂದನಾ ನುಡಿಗಳನ್ನಾಡುವರು. ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷ ರಾಘವೇಂದ್ರ ಕುಲಕರ್ಣಿ, ಬಿಎಡ್ ಕಾಲೇಜಿನ ಪ್ರಾಚಾರ್ಯೆ ಸುಧಾ ಸುಣಗಾರ ಉಪಸ್ಥಿತರಿರುವರು.
ಮಧ್ಯಾನ್ಹ 12 ಗಂಟೆಗೆ ಹರದೇಶಿ-ನಾಗೇಶಿ ಸ್ವರೂಪ ಕುರಿತು ಜರುಗಲಿರುವ ಗೋಷ್ಠಿಯ ಅಧ್ಯಕ್ಷತೆ ಸಾಲೋಟಗಿಯ ಸಾಹಿತಿ ಗೀತಯೋಗಿ ವಹಿಸುವರು. ಸಾಹಿತಿ ಸಿ ಎಂ ಬಂಡಗರ ವಿಷಯ ಮಂಡನೆ ಮಾಡುವರು. ಶಿಕ್ಷಕ ವೈ ಜಿ ಬಿರಾದಾರ, ಶಿಕ್ಷಕ ಸಾಹಿತಿ ಸಂತೋಷ ಬಂಡೆ ಉಪಸ್ಥಿತರಿರುವರು.
ಮಧ್ಯಾನ್ಹ 2.15 ಕ್ಕೆ ಜಾನಪದ ಕಲಾ ಪ್ರದರ್ಶನ: ಮದರಿಯ ಭಾಗಪ್ಪ ತಳವಾರ ತಂಡದಿಂದ ಹರದೇಶಿ ಸ್ವರೂಪ,ಗಣಿಹಾರದ ರೇಣುಕಾ ಮಾದರ ತಂಡದಿಂದ ನಾಗೇಶಿ ಸ್ವರೂಪ, ಸಾಲೋಟಗಿಯ ಬಸವೇಶ್ವರ ರೈತ ಹಂತಿ ಸಂಘದ ರಾಮಗೊಂಡ ಕಾಳಿ ಅವರ ಹಂತಿ ಹಾಡು, ಹನಮಂತ ಸುಗತೇಕರ ತಂಡದಿಂದ ಗೊಂದಲು ಹಾಡಿನ ಪ್ರದರ್ಶನ ಇರುವದು.
ಈ ಎಲ್ಲ ಕಾರ್ಯಕ್ರಮಗಳಲ್ಲಿ ಅಕಾಡೆಮಿ ಸದಸ್ಯರು, ಜಗಲಿ ಕೇಂದ್ರದ ಸದಸ್ಯರು, ಕಾಲೇಜಿನ ಸಿಬ್ಬಂದಿ ವರ್ಗ, ಪ್ರಶಿಕ್ಷಣಾರ್ಥಿಗಳು ಭಾಗವಹಿಸುವರು. ಈ ಕಾರ್ಯಕ್ರಮದಲ್ಲಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಎನ್ ನಮೃತ, ಸದಸ್ಯ ಸಂಚಾಲಕ ಡಾ ಎಂ ಎಂ ಪಡಶೆಟ್ಟಿ, ಕರ್ನಾಟಕ ವಿದ್ಯಾವರ್ಧಕ ಸಂಸ್ಥೆಯ ಕಾರ್ಯದರ್ಶಿ ಪಿ ಬಿ ಕತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.