ಯಶವಂತರಾಯಗೌಡ ಪಾಟೀಲರಿಗೆ ಸಚಿವ ಸ್ಥಾನ ನೀಡಲು ಆಗ್ರಹ..
ಇಂಡಿ : ಮತಕ್ಷೇತ್ರಕ್ಕೆ ಸ್ವಾತಂತ್ರ್ಯದ ನಂತರ ಅಂದರೆ 1947 ರಿಂದ ಇಲ್ಲಿವರೆಗೆ ಸಚಿವ ಸ್ಥಾನ ದೊರೆಯದೆ ಪ್ರಾದೇಶಿಕ ಅಸಮಾನತೆಯಾಗಿದೆ. ಕಾರಣ ತಾಲೂಕು ನಂಜುಡಪ್ಪ ಆಯೋಗದ ವರದಿ ಪ್ರಕಾರ ಅತ್ಯಂತ ಹಿಂದುಳಿದಿದೆ. ಗಡಿ ಪ್ರದೇಶವಾಗಿದ್ದರಿಂದ ಇನ್ನೂ ಅಭಿವೃದ್ಧಿ ಹೊಂದಬೇಕಿದೆ. ಈ ಕ್ಷೇತ್ರದಲ್ಲಿ ಮೂರು ಭಾರಿ ಶಾಸಕರಾಗಿ ಆಯ್ಕೆಯಾದ ಶಾಸಕ ಯಶವಂತರಾಯಗೌಡ ಪಾಟೀಲರು ಜಿಲ್ಲೆಯಲ್ಲಿಯೇ ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ ಜನಾಂಗದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಹಾಗೂ ತಾಲೂಕಿನ ಎಲ್ಲಾ ಸಣ್ಣ ಸಣ್ಣ ಸಮುದಾಯದ ಆಶಾಕಿರಣವಾಗಿ ಹೊರ ಹೊಮ್ಮಿದ್ದಾರೆ. ಈ ಎಲ್ಲ ಸಮುದಾಯಕ್ಕೆ ನ್ಯಾಯ ಒದಗಿಸಬೇಕಾದರೆ ಯಶವಂತರಾಯಗೌಡ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಲೆಬೇಕು ಎಂದು ಕಾಂಗ್ರೆಸ್ ಮುಖಂಡ ಮಹೇಶ ಹೊನ್ನಬಿಂದಿಗೆ ಬುಧವಾರ ಸುದ್ದಿಗಾರರೊಂದಿಗೆ ಮಾತಾಡಿ ಪಕ್ಷದ ವರಿಷ್ಠರಿಗೆ ಮನವಿ ಮಾಡಿದರು.