ಗೋಪಿನಾಥ ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಇಂಡಿ : ಅಂಬೇಡ್ಕರ್ ಕ್ರೀಡಾಂಗಣ ವಿಜಯಪುರ ದಲ್ಲಿ ಜರುಗಿದ ವಿಶೇಷ ಚೇತನ ಮಕ್ಕಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ನಾದ ಕೆಡಿ ಗ್ರಾಮದ
ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಗೋಪಿನಾಥ ಬೆಳ್ಳುಂಡಗಿ ಭಾಗವಹಿಸಿ, ಗುಂಡು ಎಸೆತದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಜಾವಲಿನ್ ಎಸೇತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಆಯ್ಕೆಯಾಗಿದ್ದಾರೆ.
ಆ ಕಾರಣಕ್ಕಾಗಿ ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷ ಸಿದ್ದರಾಯ ಐರೋಡಗಿ ಶಾಲಾ ಮುಖ್ಯೋಪಾಧ್ಯಯ ಸಿ ಎಂ ಬಂಡಗರ ದೈಹಿಕ ಶಿಕ್ಷಣ ಶಿಕ್ಷಕರಾದ ಸಂಗನಗೌಡ ಹಚಡದ ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ


















