IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!
Voiceofjanata.in ಬೆಂಗಳೂರು: ಕರ್ನಾಟಕ ಸರ್ಕಾರವು ನಾಲ್ವರು ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಇದರಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವಿಶೇಷ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಹುದ್ದೆಗಳಲ್ಲಿನ ಬದಲಾವಣೆಗಳು ಸೇರಿವೆ.
ಕೆ. ಲಕ್ಷ್ಮಿಪ್ರಿಯಾ ಅವರನ್ನು ಜಿಬಿಎ (GBA) ವಿಶೇಷ ಆಯುಕ್ತರನ್ನಾಗಿ ನೇಮಿಸಲಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿಯಾಗಿದ್ದ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ. ಅದೇ ರೀತಿ, ಕೆ. ಲಕ್ಷ್ಮಿಪ್ರಿಯಾ ಅವರ ಸ್ಥಾನಕ್ಕೆ ಬೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ಉತ್ತರ ಕನ್ನಡ ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿದೆ. ಅಲ್ಲದೆ, ಪ್ರಕಾಶ್ ಜಿ.ಟಿ. ನಿಟ್ಟಳ್ಳಿ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯನ್ನಾಗಿ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.
















