ಇಂಡಿ ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಬಾರಿ ಯಡವಟ್ಟು..ಮಹಿಳೆ ಸಾವು..!
ಇಂಡಿ : ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಯಡವಟ್ಟನಿಂದ ಡಯಾಲಿಸಿಸ್ ಮಹಿಳೆ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ. ಕುಡಿದು ನಶೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ಬಂದ ಸಿಬ್ಬಂದಿ ಬಸವರಾಜನಿಂದ ಭಾರಿ ಯಡವಟ್ಟು ಆಗಿದೆ ಎಂದು ಕುಟುಂಬಸ್ಥರು ಆರೋಪಿಸಿದರು. ನಶೆಯಲ್ಲಿ ಡಯಾಲಿಸಿಸ್ ಮಾಡಿ ಬಿಸ್ಮಿಲ್ಲಾ ನದಾಫ್ ಪ್ರಾಣವನ್ನೆ ತೆಗೆದಿದ್ದಾರೆ ಎಂದು ನದಾಫ್ ಕುಟುಂಬಸ್ಥರು ಆರೋಪಿಸಿದ್ದಾರೆ. ಡಯಾಲಿಸಿಸ್ ವೇಳೆ ಆಸ್ಪತ್ರೆ ಬೆಡ್ ಮೇಲೆಯೇ ರೋಗಿ ಮೃತಪಟ್ಟಿದ್ದಾಳೆ. ಇನ್ನೂ ಆಸ್ಪತ್ರೆ ಎದುರು ಶವವಿಟ್ಟು ಕುಟುಂಬಸ್ಥರು ಟೈಯರ್ ಗೆ ಬೆಂಕಿ ಹಚ್ಚಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು. ಅಲ್ಲದೇ, ನಶೆಯಲ್ಲೆ ಬಿಸ್ಮಿಲ್ಲಾಗೆ ಡಯಾಲಿಸಿಸ್ ಮಾಡಿದ ಬಸವರಾಜಗೆ ಓರ್ವ ಕಪಾಳಮೋಕ್ಷ ಮಾಡಿದ್ದಾನೆ. ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.