ಲಿಂಗಸೂಗೂರು: 2022-23 ನೇ ಸಾಲಿನ ಬಜೆಟ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೇವರಾಜ ಅರಸು ಅಭಿವೃದ್ಧಿ ನಿಗಮದಡಿ ಬರುವ ಹಿಂದುಳಿದ ಸಮುದಾಯಗಳಿಗೆ 400 ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟು, ಹಣದಲ್ಲಿ ಶ್ರೀ ಹಡಪದ ಅಪ್ಪಣ್ಣ ಪೀಠ ತಂಗಡಗಿ ಮಠದ ಸರ್ವಾಂಗೀಣ ಅಭಿವೃದ್ಧಿಗಾಗಿ 3 ಕೋಟಿ ಹಣ ವನ್ನು ಬಿಡುಗಡೆ ಮಾಡಲಾಗಿದೆ. ಹಣ ಬಿಡುಗಡೆ ಮಾಡಿದ ಸರ್ಕಾರಕ್ಕೆ ಲಿಂಗಸುಗೂರು ತಾಲೂಕಾ ಹಡಪದ ಅಪ್ಪಣ್ಣ ಯುವಕ ಸಂಘದ ಅಧ್ಯಕ್ಷ ಶರಣಬಸವ ಈಚನಾಳ, ಹಾಗೂ ಪ್ರಧಾನ ಕಾರ್ಯದರ್ಶಿ ಚುಡಾಮಣಿ ಚಿತ್ತಾಪುರ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಾಗೂ ಶ್ರೀ ಮಠಕ್ಕೆ ಅನುದಾನ ತರುವಲ್ಲಿ ಶ್ರಮವಹಿಸಿದ ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ (ರಿ) ಬೆಂಗಳೂರು ಸಮಿತಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.