ವಿಜಯಪುರ : ಸರ್ಕಾರಿ ನೌಕರರ ಸಂಘದ ಮುಷ್ಕರ ಬಿಸಿ ವಿಜಯಪುರಕ್ಕೆ ತಟ್ಟಿದೆ. ವಿಜಯಪುರ ನಗರದ ಮಹಾನಗರ ಪಾಲಿಕೆಗೆ ಬುಧವಾರ ಬೀಗ ಹಾಕಿ ಜಿಲ್ಲಾ ಸರ್ಕಾರಿ ನೌಕರರ ಸಂಘದವರು ಪ್ರತಿಭಟನೆ ನಡೆಸಿದರು. ಜಿಲ್ಲಾಧ್ಯಕ್ಷ ಸುರೇಶ ಶೇಡಶ್ಯಾಡ ನೇತೃತ್ವದಲ್ಲಿ ಬೀಗ ಹಾಕಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, 7ನೇ ವೇತನ ಆಯೋಗ ಹಾಗೂ ಹಳೆ ಪಿಂಚಣಿ ಸೇರಿದಂತೆ ನೌಕರರ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ ಮುಷ್ಕರಕ್ಕೆ ಮಹಾನಗರ ಪಾಲಿಕೆ ಸಫಾಯಿ ಕರ್ಮಚಾರಿಗಳು ಸಾಥ್ ನೀಡಿದರು.