ಸಿರುಗುಪ್ಪ: ಬಗ್ಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಚಾಣಕನೂರು ಗ್ರಾಮದಲ್ಲಿ ಚರಂಡಿ ನೀರು ಸರಾಗವಾಗಿ ಹರಿಯದೇ ರಸ್ತೆಯಲ್ಲೆ ನಿಂತು ಗಬ್ಬು ನಾರುತ್ತಿದೆ. ಅಲ್ಲದೆ ಸೊಳ್ಳೆಗಳ ಕಾಟದಿಂದ ಇಲ್ಲಿನ ಜನರು ಹೈರಾಣಾಗಿ ಹೋಗಿದ್ದಾರೆ.
ರಸ್ತೆಯ ಮೇಲೆ ಕೊಳಚೆ ನೀರು ನಿಂತು ಹರಿಯುವದರಿಂದ ಸಾರ್ವಜನಿಕರಿಗೆ ತಿರುಗಾಡಲು ತೊಂದರೆಯಾಗುತ್ತಿದೆ. ಒಂದು ವರ್ಷದಿಂದ ಚರಂಡಿ ನೀರು ರಸ್ತೆ ಬದಿಯ ಚರಂಡಿಯಲ್ಲಿ ನೀರು ನಿಂತಲ್ಲೇ ನಿಂತಿರುವುದರಿಂದ ತ್ಯಾಜ್ಯ ಸೇರಿ ದುರ್ವಾವಾಸನೆ ಬೀರುತ್ತಿದೆ. ಸುತ್ತಮುತ್ತಲಿನ ಮನೆಗಳ ವೃದ್ಧರು ಹಾಗೂ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗುವ ಪರಿಸ್ಥಿತಿ ಎದುರಾಗಿದೆ.
ಇನ್ನು ಪಂಚಾಯಿತಿ ಅಧಿಕಾರಿಗಳಿಗೆ ಹಾಗೂ ಗ್ರಾಮದ ಸದಸ್ಯರಿಗೆ ಅನೇಕ ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರಾದ
ಈರಣ್ಣ, ಶೇಷಮ್ಮ, ಮಹಾದೇವಮ್ಮ ಆಕ್ರೋಶ ಹೊರಹಾಕಿದರು.
ಇನ್ನಾದ್ರೂ ಗ್ರಾ. ಪಂ. ಅಧಿಕಾರಿಗಳು ಹಾಗೂ ಸದಸ್ಯರು ಇತ್ತ ಗಮನ ಹರಿಸಿ ಚರಂಡಿ ಸ್ವಚ್ಚಗೊಳಿಸುವಲ್ಲಿ ಮುಂದಾಗಬೇಕಿದೆ.