ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರ ಅಭಿವೃದ್ಧಿಗೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮನವಿ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರನ್ನು ಸೋಮವಾರ ಬೀದರ್ನಲ್ಲಿ ಭೇಟಿ ಮಾಡಿ ಮಹಿಳಾ ವಿವಿಯ ಬೀದರ್ ಸ್ನಾತಕೋತ್ತರ (ಪಿಜಿ) ಕೇಂದ್ರದ ಸಮಗ್ರ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿAದ ಅಗತ್ಯ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿದರು.
ಸಚಿವರೊಂದಿಗೆ ನಡೆದ ಸಭೆಯಲ್ಲಿ ಪಿಜಿ ಕೇಂದ್ರದ ಶೈಕ್ಷಣಿಕ ಹಾಗೂ ಮೂಲಸೌಕರ್ಯ ಅಗತ್ಯತೆಗಳು, ಹೆಚ್ಚುವರಿ ಸೌಲಭ್ಯಗಳ ಅವಶ್ಯಕತೆ ಮತ್ತು ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಕುಲಪತಿಗಳು ವಿವರಿಸಿದರು.
ಕುಲಪತಿಯವರ ಮನವಿಗೆ ಸಚಿವ ಈಶ್ವರ ಖಂಡ್ರೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ವಿಷಯವನ್ನು ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಸಚಿವರೊಂದಿಗಿನ ಈ ಭೇಟಿ ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರದ ಶೈಕ್ಷಣಿಕ ವಿಸ್ತರಣೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಈ ಸಂದರ್ಭದಲ್ಲಿ ಬೀದರ್ ಪಿಜಿ ಕೇಂದ್ರದ ನಿರ್ದೇಶಕ ಪ್ರೊ.ಆರ್.ವಿ.ಗಂಗಶೆಟ್ಟಿ ಅವರು ಉಪಸ್ಥಿತರಿದ್ದರ