ವಿಜಯಪುರ: ರೈತ ಸಾಲಗಾರ ಅಲ್ಲ. ಸರ್ಕಾರವೇ ಬಾಕಿದಾರ ಎಂದು ಸರ್ಕಾರಗಳ ವಿರುದ್ಧ ರೈತ ಸಂಘ ಹಾಗೂ ಹಸಿರು ಸೇನೆ ಸಂಘದವರು ನಗರದ ಡಿಸಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ಇನ್ನು ರೈತರಿಗೆ ಅನುಕೂಲವಾಗುವಂತಹ ಯಾವುದೇ ಯೋಜನೆಗಳು ಸರ್ಕಾರ ಜಾರಿಗೆ ಮಾಡಿಲ್ಲ. ಅಲ್ಲದೇ, ನದಿ ನೀರಿನ ಸದ್ಬಳಕೆ ಇಲ್ಲ. ಸರ್ಕಾರಗಳು ರೈತರ ಮೇಲೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಕೃಷಿ ಕಾಯ್ದೆ ಹಿಂಪಡೆಯಬೇಕು. ಸ್ವಾಮಿನಾಥನ್ ವರದಿ ಜಾರಿಗೊಳಿಸುವದು ಸೇರಿದಂತೆ ತಮ್ಮ ಬೇಡಿಕೆಗಳನ್ನು ತಕ್ಷಣ ಜಾರಿಗೊಳಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.