ಗುಮ್ಮಟ ನಗರಿಯ ಮಹಾನಗರ ಪಾಲಿಕೆಯ ವಾರ್ಡುಗಳ ಮೀಸಲಾತಿ ಪ್ರಕಟ. ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡುಗಳಿಗೆ ಅಂತಿಮ ಮೀಸಲಾತಿ ಪ್ರಕಟವಾಗಿದೆ. ಒಟ್ಟು 35 ವಾರ್ಡುಗಳಲ್ಲಿ 16 ವಾರ್ಡುಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ. ಮೀಸಲಾತಿ ವಿವರ ಹೀಗಿದ್ದು, ಕಳೆದ ಆಗಷ್ಟನಲ್ಲಿ ಪ್ರಕಟಿಸಿದ ಮೀಸಲಾತಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಕಲ್ಪಿಸಿತ್ತು. ಈಗ ಆಕ್ಷೇಪಣೆಗಳನ್ನು ಪರಿಗಣಿಸಿ ಹಲವಾರು ಮಾರ್ಪಾಡುಗಳನ್ನು ಮಾಡಿ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ.