ಇಂಡಿ : ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಆರ್. ಎಂ. ಶಹಾ ಪಬ್ಲಿಕ್ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಭೀಮರಾಯ ಕಡಿಹಳ್ಳಿ ಅವರಿಗೆ ಬೆಳಗಾವಿ ಜಿಲ್ಲೆಯ ಕಸ್ತೂರಿ ಸಿರಿಗನ್ನಡ ವೇದಿಕೆಯ ೨೦೨೨ನೇ ಸಾಲಿನ ಗುರು ತಿಲಕ ಪ್ರಶಸ್ತಿಗೆ ಬಾಜನರಾಗಿದ್ದಾರೆ.
ಇವರು ಹಲವಾರು ಸೃಜನಶೀಲ ಕವನ ಕಥೆಗಳನ್ನು ಬರೆಯುವುದರ ಮೂಲಕ ಸಾಹಿತ್ಯ ಹಾಗೂ ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಕಳೆದ ೯ ವರ್ಷಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಆರ್.ಎಂ. ಶಹಾ ಪಬ್ಲಿಕ್ ಶಾಲೆಯಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.
ಈ ಪ್ರಶಸ್ತಿಗೆ ಬಾಜನರಾಗಿದ್ದಕ್ಕೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಿ.ಆರ್. ಶಹಾ ಸಂಸ್ಥೆಯ ಕಾರ್ಯದರ್ಶಿ ಮಹೇಶ ಶಹಾ, ಆಡಳಿತಾಧಿಕಾರಿ ಕಲ್ಪನಾ ಶಹಾ, ಎಫ್.ಕೆ.ದೋಶಿ ಪದವಿಪೂರ್ವ ವಿಭಾಗದ ಪ್ರಾಂಶುಪಾಲ ಪರವೀನ ಜಮಾದಾರ್, ಶಾಲಾ ವಿಭಾಗದ ಪ್ರಾಚಾರ್ಯರು ಪ್ರಕಾಶ ಪಾಟೀಲ್ ಹಾಗೂ ಸಿಬ್ಬಂದಿವರ್ಗದವರು, ಮಿತ್ರರು ಹಲವಾರು ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.