ಹಂದ್ರಾಳ ಅಂಗನವಾಡಿ ಸಹಾಯಕಿ ತಾತ್ಕಾಲಿಕ ಆಯ್ಕೆ : ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ.
ಮುದ್ದೇಬಿಹಾಳ: ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಹಂದ್ರಾಳ ಗ್ರಾಮದ 01ನೇ ಕೇಂದ್ರದ ಅಂಗನವಾಡಿ ಸಹಾಯಕಿ ಹುದ್ದೆಗೆ ತಾತ್ಕಾಲಿಕ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ವಿಜಯಪುರ ಜಿಲ್ಲಾಧಿಕಾರಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಅಧ್ಯಕ್ಷರ ಅನುಮೋದನೆಯನ್ವಯ (ದಿನಾಂಕ: 11-03-2026), ಹಂದ್ರಾಳ-01 ಕೇಂದ್ರಕ್ಕೆ ಶ್ರೀಮತಿ ಮುಸ್ಕನಾ ಪೀರಸಾ ಬೇನ್ನೂರ ಇವರನ್ನು ಅವರ 10ನೇ ತರಗತಿ ವಿದ್ಯಾರ್ಹತೆ ಮತ್ತು ವಾಸಸ್ಥಳದ ದಾಖಲೆಗಳ ಆಧಾರದ ಮೇಲೆ ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗಿದೆ.
ಆಕ್ಷೇಪಣೆ ಸಲ್ಲಿಸಲು ಅಭ್ಯರ್ಥಿಯ ಆಯ್ಕೆಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಅಥವಾ ಇತರ ಅಭ್ಯರ್ಥಿಗಳಲ್ಲಿ ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ಸೂಕ್ತ ದಾಖಲೆಗಳೊಂದಿಗೆ ಈ ಕೆಳಗಿನ ಅವಧಿಯಲ್ಲಿ ಸಲ್ಲಿಸಬಹುದಾಗಿದೆ:
ಆಕ್ಷೇಪಣೆ ಸಲ್ಲಿಸಲು ನಿಗದಿಪಡಿಸಿದ ದಿನಾಂಕ: 13-03-2026 ರಿಂದ 24-03-2026 ರವರೆಗೆ.
ಸ್ಥಳ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮುದ್ದೇಬಿಹಾಳ.ಸಮಯ ಕಚೇರಿ ಕೆಲಸದ ಅವಧಿಯಲ್ಲಿ.ನಿಗದಿತ ಅವಧಿಯ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮುದ್ದೇಬಿಹಾಳದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.