ಸಿಂಧನೂರು : ರಾಜ್ಯದಲ್ಲಿ ಕೋಮು ಗಲಭೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹನುಮ ಜಯಂತಿಯನ್ನು ಆಚರಣೆ ಮಾಡುವ ಮೂಲಕ ಮುಸ್ಲಿಂ ಬಾಂಧವರು ಭಾವೈಕ್ಯತೆ ಮೆರೆದಿದ್ದಾರೆ.
ಮೆರವಣಿಗೆಯಲ್ಲಿ ಮುಸ್ಲಿಂ ಬಾಂಧವರು ಜಯಂತಿಯಲ್ಲಿ ಪಾಲ್ಗೊಂಡ ಹನುಮ ಭಕ್ತರಿಗೆ ತಂಪು ಪಾನೀಯ, ಹಣ್ಣು-ಹಂಪಲು ವಿತರಣೆ ಮಾಡಿ ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ.
ನಗರದ ಎಪಿಎಂಸಿ, ಗಣೇಶ ದೇವಸ್ಥಾನದಿಂದ ಆರಂಭವಾದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು. ಈ ವೇಳೆ ಗಾಂಧಿ ವೃತ್ತಕ್ಕೆ ಮೆರವಣಿಗೆ ಆಗಮಿಸುತ್ತಿದ್ದಂತೆ ಹಲವು ಮುಸ್ಲಿಂ ಬಾಂಧವರು ಮೆರವಣಿಗೆಯಲ್ಲಿ ಭಾಗವಹಿಸಿ ಹನುಮನ ಸೇವೆಗೆ ಪಾತ್ರರಾದರು. ಇಂತಹ ಒಂದು ಭಾವೈಕ್ಯತೆಯ ಆಚರಣೆಗೆ ಸಿಂಧನೂರು ನಗರ ಇಂದು ಸಾಕ್ಷಿಯಾಗಿತ್ತು.