ಬೆಂಗಳೂರು: ಹಿಜಾಬ್ ಕೇಸರಿ ಶಾಲು ಗಲಾಟೆ ತಾರಕಕ್ಕೇರಿದ ಹಿನ್ನಲೆಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಎಲ್ಲಾ ಪ್ರೌಢಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಶಾಲಾ-ಕಾಲೇಜುಗಳ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಆಡಳಿತ ಮಂಡಳಿಗಳು ಮತ್ತು ಕರ್ನಾಟಕದ ಜನರು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ನಾನು ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳವರೆಗೆ ಎಲ್ಲಾ ಪ್ರೌಢಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಲು ನಾನು ಆದೇಶಿಸಿದ್ದೇನೆ. ಸಂಬಂಧಪಟ್ಟವರೆಲ್ಲರೂ ಸಹಕರಿಸಲು ವಿನಂತಿ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.