ಹಿರೇಬೇವನೂರ ಗ್ರಾಮ ಪಂಚಾಯತ್ ಕಾಂಗ್ರೆಸ್ ಗೆ ವಿಜಯಲಕ್ಷ್ಮಿ..!
ಇಂಡಿ : ತಾಲ್ಲೂಕಿನ ಹಿರೇಬೇವನೂರ ಗ್ರಾಮ ಪಂಚಾಯಿತ್ ಎರಡನೇ ಅವಧಿ ಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಶನಿವಾರ ನಡೆಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷರಾಗಿ ಶೈಲಜಾ ಅಶೋಕ ಜಾಧವ ಹಾಗೂ ಉಪಾಧ್ಯಕ್ಷರಾಗಿ ಚಂದವ್ವ ಸಿದ್ದಪ್ಪ ಮೈದರಗಿ ಅವಿರೋಧವಾಗಿ ಆಯ್ಕೆಯಾದರು.
ಚುನಾವಣೆ ಅಧಿಕಾರಿಯಾಗಿ ವಲಯ ಅರಣ್ಯ ಇಲಾಖೆ ಅಧಿಕಾರಿ ಪ್ರಭುಲಿಂಗ ಬುಯ್ನಾರ ಕರ್ತವ್ಯ ನಿರ್ವಹಿಸುತ್ತಿದ್ದರು. ಇನ್ನೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ ರಾಠೋಡ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಗ್ರಾಮದ ಮುಖಂಡರು ಉಪಸ್ಥಿತರಿದ್ದರು.